ಸರ್ಕಾರಿ ಶಿಕ್ಷಕರ ನೇಮಕಾತಿಗೆ ತಿದ್ದುಪಡಿ ತಂದ ರಾಜ್ಯ ಬಿಜೆಪಿ ಸರ್ಕಾರ
ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ (6ರಿಂದ 8ನೇ ತರಗತಿ) ನೇಮಕಾತಿ ಪ್ರಕ್ರಿಯೆ ನಿಯಮಾವಳಿಗಳ ತಿದ್ದುಪಡಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಆ ಮೂಲಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಬದಲಾವಣೆಯನ್ನು ರಾಜ್ಯ ಸರ್ಕಾರ ತಂದಿದೆ. ಈ ಮೊದಲು ಶಿಕ್ಷಕರ ನೇಮಕಾತಿ ಅಧಿಸೂಚನೆಯ ನಿಯಮಾವಳಿಗಳಿಂದಾಗಿ ಖಾಲಿಯಿದ್ದ ಎಲ್ಲ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯವಾಗಿರಲಿಲ್ಲ. ನೇಮಕಾತಿ ನಿಯಮಾವಳಿಂದಾಗಿ ಹೆಚ್ಚಿನ ಶಿಕ್ಷಕರ ಹುದ್ದೆಗಳು ಖಾಲಿ ಬಿದ್ದಿದ್ದವು. ಹೀಗಾಗಿ ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ತರಲು ಉದ್ದೇಶಿಸಲಾಗಿತ್ತು.
ನೂತನ ನಿಯಮಾವಳಿ ಪ್ರಕಾರ ವಿಜ್ಞಾನ ಶಿಕ್ಷಕರ ಹುದ್ದೆಗಳಿಗೆ ಇಂಜಿನಿಯರಿಂಗ್ ಪದವೀಧರರೂ ಸೇರಿದಂತೆ ಬೇರೆ ವಿಷಯಗಳಲ್ಲಿ ಪದವಿ ಪಡೆದವರಿಗೂ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಇನ್ನು ಮುಂದೆ ಇಂಜಿನಿಯರ್‌ಗಳು ಶಿಕ್ಷಕರಾಗಿ ಸೇವೆ ಸಲ್ಲಿಸಬಹುದು.
ಆದರೆ ಹೊಸ ನಿಯಮಾವಳಿ ಪ್ರಕಾರ ಈಗಾಗಲೇ ಡಿ.ಇಡಿ ಹಾಗೂ ಬಿ.ಇಡಿ ಮುಗಿಸಿದವರೂ ಸರ್ಕಾರಿ ನೇಮಕಾತಿಗಾಗಿ ಇಂಜನಿಯರ್ ಪದವಿಧರರೊಂದಿಗೆ ಪೈಪೋಟಿ ಎದುರಿಸಬೇಕಾಗುತ್ತದೆ.