ಸಾರಿಗೆ ನೌಕರರ ಜೊತೆ ಮಾತುಕತೆಗೆ ಸವದಿಗೆ ಸಿಎಂ ಸೂಚನೆ
ಬೆಂಗಳೂರು: ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು 4 ವಿಭಾಗದ ಸಾರಿಗೆ ನಿಗಮಗಳ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ನೌಕರರ ಮುಷ್ಕರದಿಂದಾಗಿ ರಾಜ್ಯದ ಬಹುತೇಕ ಕಡೆ ಬಸ್ಸುಗಳ ಸಂಚಾರ ಸ್ಥಗಿತಗೊಂಡು ಸಾರ್ವಜನಿಕರ ಅಸಮಾಧಾನಕ್ಕೂ ಸರ್ಕಾರ ಈಡಾಗಿದೆ. ಪ್ರತಿಭಟನೆ ಶುರುವಾದ ಮೊನ್ನೆಯಿಂದಲೂ ನೌಕರರ ಜೊತೆ ಮಾತುಕತೆಗೆ ಆಸಕ್ತಿ ತೋರದ ಸರ್ಕಾರ ಇದೀಗ ಎಚ್ಚೆತ್ತುಕೊಳ್ಳುತ್ತಿದೆ. ಇಂದು ಗೃಹ ಸಚಿವರ ಜೊತೆ ಸಿಎಂ ಸಭೆ ನಡೆಸಿ ಪರಿಸ್ಥಿತಿ ಅವಲೋಕನ ಮಾಡಿದ್ದಾರೆ. ಮುಷ್ಕರ ನಿರತ ಸಂಘಟನೆಗಳ ಜೊತೆ ಕೂಡಲೇ ಮಾತುಕತೆ ನಡೆಸುವಂತೆ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆನ್ನಲಾಗಿದೆ.
Fast9 Latest Kannada News