ಸತೀಶ ಜಾರಕಿಹೋಳಿ ಬೇಳಗಾವಿ ಉಪಚುನಾವಣೆ ಕಾಂಗ್ರೇಸ್ಸ್ ಅಬ್ಯರ್ಥಿ
ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆ ಮತ್ತು ಬೀದರ್ ವಿಧಾನಸಭೆ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಯಿತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಎಸ್.ಆರ್.ಪಾಟೀಲ್, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಮ್ ಅಹಮ್ಮದ್, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಚಿವ ಎಂ.ಬಿ.ಪಾಟೀಲ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಅನೇಕ ನಾಯಕರ ಸಮ್ಮುಖದಲ್ಲಿ
ಬಹುತೇಕ ಸತೀಶ್ ಜಾರಕಿಹೊಳಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.ಇಲ್ಲದೆ ಹೋದರೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಹೋದರ ಚನ್ನರಾಜು ಅಥವಾ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಅಭ್ಯರ್ಥಿಗಳಾಗಲಿದ್ದಾರೆಂದು ಚರ್ಚಿಸಲಾಗಿದೆ