ಬೆಳಗಾವಿ: ಲೋಕಸಭಾ ಉಪ ಚುನಾವಣೆಗೆ ತಮಗೆ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ ಮಾಡಿಲ್ಲ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ಪಷ್ಟನೆ ನೀಡಿದರು.
ರಾಹುಲ್ ಗಾಂಧಿ ಅವರು ಕರೆ ಮಾಡಿ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡ ಹೇರಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು, ಈ ವಿಚಾರವಾಗಿ ನಗರದಲ್ಲಿಂದು ಪ್ರತಿಕ್ರಿಯಿಸಿದರು.
ತಮಗೆ ಸ್ಪರ್ಧೆ ಮಾಡುವಂತೆ ರಾಹುಲ್ ಗಾಂಧಿ ಅವರು ಕರೆ ಮಾಡಿಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಬೆಳಗಾವಿ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಯಾಗುತ್ತಿದ್ದಂತೆ ಅಭ್ಯರ್ಥಿಯ ಹೆಸರು ಹೇಳಲಾಗುವುದು. ನಾಲ್ವರ ಹೆಸರು ಕೇಳಿಬಂದಿದೆ. ಅದರಲ್ಲಿ ಒಬ್ಬರಿಗೆ ಟಿಕೆಟ್ ನೀಡಲಾಗುತ್ತದೆ. ಈ ಕುರಿತು ಇನ್ನು ಚರ್ಚೆ ನಡೆಯುತ್ತಿದೆ ಎಂದರು.
ಪ್ರಕಾಶ ಹುಕ್ಕೇರಿ ಅವರಿಗೆ ಟಿಕೆಟ್ ನೀಡುವುದು ಹೈಕಮಾಂಡ್ ಗೆ ಬಿಟ್ಟು ವಿಚಾರ. ಇಲ್ಲಿಯೂ ಅಭ್ಯರ್ಥಿಗಳಿದ್ದಾರೆ. ತಮ್ಮ ಕ್ಷೇತ್ರವನ್ನೇ ಮರಳಿ ಪಡೆಯಲು ಅವರಿಗೆ ಇನ್ನು ಮೂರು ವರ್ಷ ಅವಕಾಶವಿದೆ ಎಂದಷ್ಟೇ ಹೇಳಿದರು.
Fast9 Latest Kannada News