ಜ್ವರ, ನೆಗಡಿ ಮತ್ತು ಕೆಮ್ಮು ಇದ್ದರೆ ತಕ್ಷಣ ಕೊರೊನಾ ಚಿಕಿತ್ಸೆ ಮಾಡಿಸಿಕೊಳ್ಳಿ : ಪ್ರಕಾಶ ಹೊಳೆಪ್ಪಗೋಳ
ಜ್ವರ, ನೆಗಡಿ ಮತ್ತು ಕೆಮ್ಮು ಇದ್ದರೆ ತಕ್ಷಣ ಕೊರೊನಾ ಚಿಕಿತ್ಸೆ ಮಾಡಿಸಿಕೊಳ್ಳಬೇಕೆಂದು ಗೋಕಾಕ ತಾಲೂಕಿನ ಶಿಂದಿಕುರಬೇಟ ಗ್ರಾಮಕ್ಕೆ ಭೇಟಿ ನೀಡಿ ಕೊರೊನಾ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಗೋಕಾಕ ತಹಸಿಲ್ದಾರ ಪ್ರಕಾಶ ಹೊಳೆಪ್ಪಗೋಳ ಕರೆ ನೀಡಿದರು.
ಆರೋಗ್ಯದಲ್ಲಿ ಏರುಪೇರು ಕಂಡು ಬಂದಲ್ಲಿ ಯಾವುದಕ್ಕೂ ಭಯ ಪಡದೆ ಆರೋಗ್ಯ ಅಧಿಕಾರಿಗಳನ್ನು ಭೇಟಿ ಚಿಕಿತ್ಸೆ ಪಡೆಯಲು ವಿನಂತಿಸಿದರು.ಯಾಕೆಂದರೆ ಕೊರೊನಾ ಈಗ ಹಳ್ಳಿಗಳಲ್ಲಿ ವ್ಯಾಪಕವಾಗಿ ಹರಡಿ ದಿನದನಕ್ಕೂ ಸಾವು ಪಡೆಯುತ್ತಲಿದೆ.
ಅದಕ್ಕಾಗಿ ನಾವೆಲ್ಲರೂ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಜೊತೆಯಲ್ಲಿ ಚಿಕಿತ್ಸೆ ಪಡೆಯುವುದು ಕೂಡ ಅತ್ಯಂತ ಅವಶ್ಯವಾಗಿದೆ ಎಂದರು,ಇನ್ನು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಇದಕ್ಕೆ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಜಾಗ್ರತೆ ಮೂಡಿಸುವ ಕೆಲಸ ಮಾಡಬೇಕೆಂದರು.
ಇದೆ ವೇಳೆ ರಸ್ತೆ ಬದಿಯಲ್ಲಿ ಸ್ಮಶಾನ ಮಾಡಿದ್ದು, ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಕೇಳಿದ ಪ್ರಶ್ನೆಗೆ ಉತ್ತರಿಸಿದ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರು ಬೇರೆ ಕಡೆ ಜಾಗದ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಸರ್ಕಾರ ಬರುವ ಸೋಮವಾರದವರೆಗೆ ಲಾಕ್ ಡೌನ್ ಗೆ ನಿರ್ಧರಿಸಿದ್ದು, ಅದನ್ನು ಗ್ರಾಮಸ್ಥರು ಒಂದು ವಾರದವರೆಗೆ ಮುಂದುವರಿಸಬಹುದು ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷೆ, ಉಪಾಧ್ಯಕ್ಷ , ಸಿಪಿಐ ಶ್ರೀಶೈಲ ಬ್ಯಾಕೂಡ, ಉಪ ತಹಶೀಲ್ದಾರ್ ಎಸ್.ಎನ್. ಹಿರೇಮಠ, ಗ್ರಾಮಲೆಕ್ಕಾಧಿಕಾರಿ ಮತ್ತು ಪಂಚಾಯತ ಸದಸ್ಯರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆಯು ಸಿಬ್ಬಂದಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.