Breaking News

ಪಿಎಸ್‌ಐ ನೇಮಕಾತಿ ಅಕ್ರಮ; ಟಾಪ್ ಅಭ್ಯರ್ಥಿಗಳಿಗೆ ನೋಟಿಸ್ ಸಂಕಷ್ಟ

Spread the love

ಪಿಎಸ್‌ಐ ನೇಮಕಾತಿ ಅಕ್ರಮ; ಟಾಪ್ ಅಭ್ಯರ್ಥಿಗಳಿಗೆ ನೋಟಿಸ್ ಸಂಕಷ್ಟ

ಬೆಂಗಳೂರು,: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮದ ತನಿಖೆ ಮುಂದುವರೆದಿದೆ. ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಟಾಪ್ 50 ಅಭ್ಯರ್ಥಿಗಳಿಗೆ ನೋಟಿಸ್ ನೀಡಿದ್ದಾರೆ. ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಏಪ್ರಿಲ್ 20ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಅಭ್ಯರ್ಥಿಗಳಿಗೆ ಸೂಚಿಸಿದ್ದಾರೆ. 545 ಅಭ್ಯರ್ಥಿಗಳ ಪೈಕಿ ಟಾಪ್ 50 ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ನೋಟಿಸ್ ನೀಡಲಾಗಿದೆ. ಅಕ್ರಮದ ಆರೋಪ: 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಸ್ಥಗಿತ ಈ ಪ್ರಕರಣದಲ್ಲಿ ಇದುವರೆಗೂ 8 ಜನರನ್ನು ಬಂಧಿಸಲಾಗಿದೆ. ಭಾನುವಾರ ಕಲಬುರಗಿಯ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಪತಿ ರಾಜೇಶ್ ಬಂಧಿಸಿದ್ದು, ಅಧಿಕಾರಿಗಳು ವಾಹನ ವಶಕ್ಕೆ ಪಡೆದಿದ್ದರು. ಸೋಮವಾರ ಜ್ಞಾನ ಜ್ಯೋತಿ ಇಂಗ್ಲಿಶ್‌ ಮಾಧ್ಯಮ ಶಾಲೆಯ ಮೇಲೆ ಪೊಲೀಸರು ದಾಳಿ ಮಾಡಿದ್ದರು. ಪಿಎಸ್ಐ ನೇಮಕಾತಿ ಅಕ್ರಮ: 6 ಮಂದಿ ಆರೋಪಿಗಳನ್ನು ಬಂಧಿಸಿದ ಸಿಐಡಿ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಪ್ರತಿಕ್ರಿಯೆ ನೀಡಿದ್ದರು. “ಅಕ್ರಮ ನಡೆದಿರುವ ಕುರಿತು ಗೃಹ ಸಚಿವರ ಗಮನಕ್ಕೆ ಬಂದ ತಕ್ಷಣ ನಿಷ್ಪಕ್ಷಪಾತ ತನಿಖೆಗಾಗಿ ಸಿಐಡಿಗೆ ವಹಿಸಲಾಗಿದೆ. ತನಿಖೆಗೆ ಮುಕ್ತ ಅವಕಾಶ ನೀಡಿದ್ದೇವೆ” ಎಂದು ಹೇಳಿದ್ದರು. ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮ: ಸಿಐಡಿ ತನಿಖೆ ಸಿಐಡಿ ಈಗಾಗಲೇ ಅಭ್ಯರ್ಥಿಗಳಾದ ಕಲಬುರಗಿಯ ವೀರೇಶ ನಿಡಗುಂದಿ, ಅರುಣ ಪಾಟೀಲ, ರಾಯಚೂರಿನ ಪ್ರವೀಣ ಕುಮಾರ, ಚೇತನ ನಂದಗಾಂವ ಬಂಧಿಸಿದೆ. ಪರೀಕ್ಷಾ ಮೇಲ್ವಿಚಾರಣೆಗೆ ನಿಯೋಜನೆಗೊಂಡಿದ್ದ ಶಿಕ್ಷಕಿಯರಾದ ಸುಮಾ, ಸಿದ್ಧಮ್ಮ ಮತ್ತು ಸಾವಿತ್ರಿಯನ್ನು ಸಹ ಬಂಧಿಸಲಾಗಿದೆ. ಈ ಎಲ್ಲಾ ಆರೋಪಿಗಳ ಪೊಲೀಸರ ವಶದಲ್ಲಿದ್ದು, ಏಪ್ರಿಲ್ 20ರಂದು ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ. ಬಂಧಿತ ರಾಜೇಶ್‌ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶಿಸಿದೆ. ಸಿಐಡಿ ಹೆಚ್ಚುವರಿ ಎಸ್‌ಪಿ ರಾಘವೇಂದ್ರ ಹೆಗಡೆ, ಡಿವೈಎಸ್‌ಪಿ ಶಂಕರಗೌಡ ಪಾಟೀಲ, ಪ್ರಕಾಶ್ ರಾರೋಡ ನೇತೃತ್ವದ ತಂಡ ತನಿಖೆ ಚುರುಕುಗೊಳಿಸಿದೆ. ಸಿಬಿಐ ತನಿಖೆಗೆ ಆಗ್ರಹ; 545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ನೊಂದ ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ. ನೇಮಕಾತಿ ಆದವರ ತಾತ್ಕಲಿಕ ಪಟ್ಟಿ ರದ್ದು ಮಾಡಬೇಕು. ಹೊಸದಾಗಿ ಪರೀಕ್ಷೆ ನಡೆಸಬೇಕು. ಹೊಸ ಪರೀಕ್ಷೆ ದಿನಾಂಕ ಶೀಘ್ರವೇ ಪ್ರಕಟಿಸಬೇಕು ಎಂದು ಅಭ್ಯರ್ಥಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.


Spread the love

About Fast9 News

Check Also

ಪದ್ಮಭೂಷಣ ಬಿ.ಸರೋಜಾದೇವಿ ನಿಧನಕ್ಕೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಸಂತಾಪ

Spread the loveಪದ್ಮಭೂಷಣ ಬಿ.ಸರೋಜಾದೇವಿ ನಿಧನಕ್ಕೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಸಂತಾಪ ಗೋಕಾಕ- ಹಿರಿಯ ಚತುರ್ಭಾಷೆ …

Leave a Reply

Your email address will not be published. Required fields are marked *