PUC ಪರೀಕ್ಷಾ ನಡೆಯುವ ಸ್ಥಳಗಳ ಸಮೀಪ ಝರಾಕ್ಸ್ ಅಂಗಡಿ ಬಂದ್,,,,
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಹಿನ್ನೆಲೆಯಲ್ಲಿ ಏಪ್ರಿಲ್ 21 ರಿಂದ ಮೇ. 18 ರ ವರೆಗೆ ರಾಜ್ಯದ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬೆಳಗ್ಗೆ 9.30 ರಿಂದ ಮಧ್ಯಾಹ್ನ 1.30 ರ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ಮೊದಲ ಹಂತದಲ್ಲಿ ಬೆಂಗಳೂರು ಕಮೀಷನರೇಟ್ ವ್ಯಾಪ್ತಿಯ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಪಂತ್ ಆದೇಶ ಹೊರಡಿಸಿದ್ದಾರೆ.
ಮೊದಲ ಹಂತದಲ್ಲಿ ನಗರ ಪೊಲೀಸ್ ಆಯುಕ್ತರು, ಬೆಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.
ಇದರ ಬೆನ್ನಲ್ಲೇ ಆಯಾ ಜಿಲ್ಲಾ ಪೊಲೀಸ್ ಅಧೀಕ್ಷಕರು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಿದ್ದಾರೆ. ಜಿಲ್ಲಾಧಿಕಾರಿಗಳು ನೀಡಿರುವ ವರದಿ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಯಾವುದೇ ಜೆರಾಕ್ಸ್ ಅಂಗಡಿ ಬಾಗಿಲು ತೆಗೆಯದಂತೆ ಸೂಚಿಸಲಾಗಿದೆ. ಇದೇ ರೀತಿಯ ಆದೇಶ ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ಹೊರ ಬೀಳಲಿದೆ.