ಸಚಿವ ಸ್ಥಾನ ನೀಡದಿದ್ದರೆ ರಾಜೀನಾಮೆ ಎಚ್ಚರಿಕೆ,,?
135 ಸ್ಥಾನ ಗೆದ್ದಿರುವ ಕಾಂಗ್ರೆಸ್ ಪಾಳಯದಲ್ಲಿ ಸಚಿವಾಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದರ ನಡುವೆ ರೋಣ ಕ್ಷೇತ್ರದ ಶಾಸಕ ಜಿ.ಎಸ್.ಪಾಟೀಲ್‌ಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಬೆಂಬಲಿಗರು ಪಟ್ಟು ಹಿಡಿದಿದ್ದಾರೆ. ಒಂದು ವೇಳೆ ಸಚಿವ ಸ್ಥಾನ ನೀಡದಿದ್ದರೆ, ಪದಾಧಿಕಾರಿಗಳು ತಮ್ಮ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ, ಮುಂಬರುವ ಚುನಾವಣೆಗಳನ್ನು ಬಹಿಷ್ಕಾರ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.