ಬಾಲಕಿಯ ಕತ್ತು ಕೊಯ್ದು ತಾನೂ ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿ Ī•
Ī•
ಹಾಸನ: ಪ್ರೀತಿ ನಿರಾಕರಿಸಿದಳು ಎನ್ನುವ ಕಾರಣಕ್ಕೆ ಹುಡುಗನೊಬ್ಬ, ಅಪ್ರಾಪ್ತ ಬಾಲಕಿಯ ಕತ್ತು ಕೊಯ್ದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ.
ಕೊಲೆಯಾಗಿರುವ ಅಪ್ರಾಪ್ತ ಬಾಲಕಿ ಬೆಳಗುಂಬ ಸರ್ಕಾರಿ ಪ್ರೌಢಶಾಲೆಯಲ್ಲಿ ಓದುತ್ತಿದ್ದಳು.
ಬಾಲಕಿ ನಿನ್ನೆ ಸಂಜೆ ಶಾಲೆ ಮುಗಿಸಿ ವಾಪಸ್ ಮನೆಗೆ ಬರುತ್ತಿದ್ದಾಗ ಅಡ್ಡಗಟ್ಟಿದ ಶರತ್ ಎಂಬಾತ ಆಕೆಯ ಬಳಿ ತನ್ನನ್ನು ಪ್ರೀತಿಸುವಂತೆ ಬಲವಂತ ಮಾಡಿದ್ದಾನೆ. ಆದರೆ ಆಕೆ ಅವನ ಪ್ರೀತಿಯನ್ನು ನಿರಾಕರಣೆ ಮಾಡಿದ್ದಾಳೆ. ಇದರಿಂದ ಕೋಪಗೊಂಡ ಶರತ್ ಬಾಲಕಿಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ಬಳಿಕ ಆತ್ಮಹತ್ಯೆ ಮಾಡಿಕೊಂಡು ಪ್ರಾಣಬಿಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಅರಸೀಕೆರೆ ಗ್ರಾಮಂತರ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
 Fast9 Latest Kannada News
Fast9 Latest Kannada News
				 
			 
			 
			 
		 
						
					 
						
					 
						
					 
					
				