Breaking News

ಅಷ್ಠ ಬಂಧ ಪ್ರತಿಷ್ಠಾ ಬ್ರಹ್ಮಕಲಶೋತ್ಸವಆಮಂತ್ರಣ ಪತ್ರಿಕೆಗಳನ್ನು ಬಿಡುಗಡೆ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

Spread the love

ಅಷ್ಠ ಬಂಧ ಪ್ರತಿಷ್ಠಾ ಬ್ರಹ್ಮಕಲಶೋತ್ಸವಆಮಂತ್ರಣ ಪತ್ರಿಕೆಗಳನ್ನು ಬಿಡುಗಡೆ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಗೋಕಾಕ* – ಗೋಕಾಕ ಗ್ರಾಮ ದೇವತಾ ಯಾತ್ರಾ ಮಹೋತ್ಸವಕ್ಕಿಂತ ಮುಂಚೆ ನಡೆಯುವ ಮಹಾಲಕ್ಷ್ಮೀ, ಗಣಪತಿ, ಆಂಜನೇಯ, ನಾಗದೇವ, ನವ ಗ್ರಹ ದೇವರ ಮೂರ್ತಿ ಪ್ರತಿಷ್ಠಾಪನೆ, ಬ್ರಹ್ಮ ಕಲಶೋತ್ಸವ ಮತ್ತು ಮಹಾ ರಥೋತ್ಸವವು
ಬರುವ ೩೦ ರಿಂದ ಮೇ ೮ ರ ವರೆಗೆ ಜರುಗಲಿದ್ದು, ನಗರದಲ್ಲಿರುವ ಪ್ರತಿಯೊಂದು ಮನೆ – ಮನೆಗೂ ಆಮಂತ್ರಣ ಪತ್ರಿಕೆಗಳನ್ನು ತಲುಪಿಸುವ ಮೂಲಕ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶಾಸಕ ಮತ್ತು ಬೇಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.
ಭಾನುವಾರದಂದು ನಗರದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಂಜೆ ಜಾತ್ರಾ ಮಹೋತ್ಸವದ ಸಮಿತಿಯಿಂದ ಹೊರತಂದ ಮಹಾಲಕ್ಷ್ಮೀ ಪರಿವಾರದ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಗಳನ್ನು ಬಿಡುಗಡೆ ಮಾಡಿ ಮಾತನಾಡಿದರು.
ಪ್ರತಿಯೊಂದು ಮನೆಗೆ ಆಮಂತ್ರಣ ಪತ್ರಿಕೆಗಳನ್ನು ಮುಟ್ಟಿಸಬೇಕು. ಜೊತೆಗೆ ಇದಕ್ಕೆ ಸಂಬಂಧಪಟ್ಟ ಅನೇಕ ಜವಾಬ್ದಾರಿಗಳನ್ನು ನಿಭಾಯಿಸಬೇಕು. ಮೂರ್ತಿ ಪ್ರತಿಷ್ಠಾಪನೆ ಮತ್ತು ಬ್ರಹ್ಮ
ಕಲಶೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲು ಅವರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಿಮ್ಮದಾಗಿದೆ. ಈಗಾಗಲೇ ಇದಕ್ಕೆ ಸಂಬಂಧಿಸಿದಂತೆ ಅನೇಕ ಕಮಿಟಿಗಳನ್ನು ರಚಿಸಲಾಗಿದ್ದು, ಆಯಾ ಕಮಿಟಿಗಳ ಪ್ರಮುಖರು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಬೇಕು. ಏಪ್ರಿಲ್ ೩೦ ರಿಂದ ಒಟ್ಟು ೯ ದಿನಗಳ ಕಾಲ ನಡೆಯುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಯಶಸ್ಸಿಗೆ ಪ್ರತಿಯೊಬ್ಬರೂ ತನು ಮನ ಧನದಿ೦ದ ಕೆಲಸ ಮಾಡುವಂತೆ ಅವರು ಹೇಳಿದರು.
ಗೋಕಾಕ ನಗರವು ನವ ವಧುವಿನಂತೆ ಶೃಂಗಾರ ಗೊಳ್ಳಬೇಕು. ಎಲ್ಲಿ ನೋಡಿದಲ್ಲಿ ಜಾತ್ರೆಯ ವಾತಾವರಣದಂತೆ ಕಂಗೊಳಿಸಬೇಕು. ಅದಕ್ಕಾಗಿ ಜಾತ್ರಾ ಮಹೋತ್ಸವದ ಕಮಿಟಿಯವರು ಹೆಚ್ಚಿನ ಪರಿಶ್ರಮ ತೆಗೆದುಕೊಳ್ಳಬೇಕು. ಎಲ್ಲ ಜನಾಂಗದ ಬಾಂಧವರು ಇದರಲ್ಲಿ ಭಾಗವಹಿಸುವ ಮೂಲಕ ಕೋಮು ಸಾಮರಸ್ಯ ಸಂದೇಶ ನೀಡುವಂತೆ ಅವರು ಹೇಳಿದರು.
ಕೆ. ವಿ. ರಾಘವೇಂದ್ರ ಉಪಾಧ್ಯಾಯ ಜ್ಯೋತಿಷ್ಯರ ಉಪಸ್ಥಿತಿಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ಹೇಳಿದರು.
ಸುಮಾರು ಒಂಭತ್ತು ದಿನಗಳ ಕಾಲ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಸುಮಾರು ೪೦ ವಿವಿಧ ಪೂಜೆಗಳು ಜರುಗಲಿವೆ ಎಂದು ಅವರು ತಿಳಿಸಿದರು.
ಅಷ್ಟ ಬಂಧ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವ ಮತ್ತು ಮಹಾ ರಥೋತ್ಸವದ ಆಮಂತ್ರಣ ಪತ್ರಿಕೆಗಳನ್ನು ಸಿದ್ದಪ್ಪ ಹುಚ್ಚರಾಮಗೊಳ ಅವರಿಗೆ ನೀಡುವ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಜಾತ್ರಾ ಮಹೋತ್ಸವ ಸಮಿತಿಯ ಸದಸ್ಯರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.


Spread the love

About Fast9 News

Check Also

ಡಾ: ಬಿ,ಆರ್,ಅಂಬೇಡ್ಜರ ಹೊರಾಟದಿಂದ ಇವತ್ತು ಮಹಿಳೆಯರು ಪ್ರತಿ ಕ್ಷೇತ್ರದಲ್ಲಿಯೂ ಪ್ರತಿನಿದಿಸುತ್ತಿದ್ದಾರೆ: ಸುಧಾ ಪೂಜೇರಿ

Spread the loveಡಾ: ಬಿ,ಆರ್,ಅಂಬೇಡ್ಜರ ಹೊರಾಟದಿಂದ ಇವತ್ತು ಮಹಿಳೆಯರು ಪ್ರತಿ ಕ್ಷೇತ್ರದಲ್ಲಿಯೂ ಪ್ರತಿನಿದಿಸುತ್ತಿದ್ದಾರೆ: ಸುಧಾ ಪೂಜೇರಿ ಗೋಕಾಕ : ಯಾವುದೇ …

Leave a Reply

Your email address will not be published. Required fields are marked *