ಗೋಕಾಕ: ವಿಧಾನ ಪರಿಷತ್ತಿನ ಉಪಸಭಾಪತಿಯಾಗಿದ್ದ ಎಸ್.ಎಲ್.ಧರ್ಮೇಗೌಡ ಅವರ ನಿಧನಕ್ಕೆ ಕೆಎಮ್‍ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಸರಳ ಸಜ್ಜನಿಕೆ ವ್ಯಕ್ತಿಯಾಗಿದ್ದ ಧರ್ಮೇಗೌಡರು ವಿಧಾನ ಪರಿಷತ್ತಿನ ಉಪಸಭಾಪತಿಗಳಾಗಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ನಿಧನದಿಂದ ಒಬ್ಬ ಆತ್ಮೀಯ ಗೆಳೆಯನೊಬ್ಬನನ್ನು ಕಳೆದುಕೊಂಡಂತಾಗಿದೆ. ಧರ್ಮೇಗೌಡರ ಆತ್ಮಕ್ಕೆ ಪರಮಾತ್ಮನು ಚಿರಶಾಂತಿ ನೀಡಲಿ. ಅವರ ಕುಟುಂಬದವರಿಗೆ ಅಗಲಿಕೆಯ ದು:ಖವನ್ನು ಸಹಿಸುವ ಶಕ್ತಿಯನ್ನು ಕರುಣ ಸಲಿ ಎಂದು ಪರಮಾತ್ಮನಲ್ಲಿ ಪ್ರಾರ್ಥಿಸುವದಾಗಿ …
Read More »ಶಿಕ್ಷಕರ ಸಂಘದಿಂದ ನಾಗಪ್ಪ ಶೇಖರಗೋಳ ಅವರಿಗೆ ಸತ್ಕಾರ
ಗೋಕಾಕ: ಶಿಕ್ಷಕರು ತಮ್ಮ ಕರ್ತವ್ಯದ ಜೊತೆಗೆ ಸಂಘದ ಪ್ರಗತಿಗೂ ಶ್ರಮಿಸಿ, ಶಿಕ್ಷಕರ ಸಂಘವನ್ನು ಮಾದರಿ ಸಂಘವನ್ನಾಗಿ ರೂಪಿಸಲು ಅರಭಾವಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಶನಿವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ನೀಡಿದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಕರು ರಾಷ್ಟ್ರದ ಶಿಲ್ಪಿಗಳಾಗಿದ್ದು, ಸಮಾಜವನ್ನು ಬದಲಿಸುವ ಶಕ್ತಿ ಶಿಕ್ಷಕರಿಗಿದೆ ಎಂದು ತಿಳಿಸಿದರು. ನೂತನವಾಗಿ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳು …
Read More »ಪಕ್ಷಕ್ಕಾಗಿ ಯುವಕರು ಶ್ರಮಿಸಿ, ಸಂಘಟನೆಯತ್ತ ಒಲವು ತೋರಲಿ-ಡಾ: ಬಾಳಿಕಾಯಿ
ಗೋಕಾಕ: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಠಿಯ ನಾಯಕತ್ವದಿಂದ ಇಡೀ ಪ್ರಪಂಚವೇ ನಮ್ಮ ರಾಷ್ಟ್ರದತ್ತ ನೋಡುತ್ತಿದೆ, ಹೀಗಾಗಿ ಮೋದಿ ಅವರು ಪ್ರಪಂಚದ ಶಕ್ತಿಶಾಲಿ ಪ್ರಧಾನಿಯಾಗಿದ್ದಾರೆ. ರಾಷ್ಟ್ರದ ಉದ್ದಗಲಕ್ಕೂ ಬಿಜೆಪಿ ಬೇರೂರಿದ್ದು, ರಾಷ್ಟ್ರದ ಸಮಗ್ರ ಪ್ರಗತಿ ಅದು ಬಿಜೆಪಿಯಿಂದ ಮಾತ್ರವೇ ಸಾಧ್ಯವೆಂದು ಬಿಜೆಪಿ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ: ಮಲ್ಲಿಕಾರ್ಜುನ ಬಾಳಿಕಾಯಿ ತಿಳಿಸಿದರು. ಶುಕ್ರವಾರದಂದು ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಬಿಜೆಪಿ ಯುವ ಮೋರ್ಚಾ ಅರಭಾವಿ ಮಂಡಲದ ಕಾರ್ಯಕಾರಣ …
Read More »ಮುಂದಿನ ದಿನದಲ್ಲಿ ಗೋಕಾಕ ತಾಲೂಕ ಪ್ರವಾಸಿ ತಾಣ ಆಗುತ್ತದೆ: ರಮೇಶ ಜಾರಕಿಹೋಳಿ
ಗೋಕಾಕ : ಗೋಕಾಕ ಪಾಲ್ಸ್, ಗೂಡಚಿ ಮಲ್ಕಿ, ಹಿಡಕಲ್ ಡ್ಯಾಂ, ದುಪದಾಳ ಜಲಾಶಯ ಇವುಗಳನ್ನು ಅಭಿವೃದ್ಧಿ ಪಡಿಸಿ, ಅಂತರಾಷ್ಟ್ರೀಯ ತರಹ ಸುಂದರ ಪ್ರವಾಸಿ ತಾಣವನ್ನಾಗಿಸಲು ಗುರಿ ಹೊಂದಲಾಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಗೋಕಾಕದ ತಮ್ಮ ಗೃಹ ಕಚೇರಿಯಲ್ಲಿ ಶುಕ್ರವಾರ ಅಟಲ್ ಜೀ ಜಯಂತಿ ಆಚರಿಸಿ ಮಾತನಾಡಿದ ಅವರು ಜಲಸಂಪನ್ಮೂಲ ಇಲಾಖೆಯಿಂದ ಗೋಕಾಕ ಬಾಗದಲ್ಲಿ 300 ರಿಂದ 350 ಕೋಟಿ ವೆಚ್ಚದ ಕೆಲಸ ಆರಂಭವಾಗಬೇಕಿತ್ತು. ಆದರೆ …
Read More »ನಂದಿನಿಯಿoದ ಗ್ರಾಹಕರಿಗೆ ಗುಡ್ ನ್ಯೂಸ್: ಸಿಹಿ-ಚೀಸ್ ಫೇಸ್ಟ್ ಮೇಲೆ ಶೇಕಡಾ 10ರಷ್ಟು ರಿಯಾಯಿತಿ.
ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಬೆಂಗಳೂರು: ರಾಜ್ಯದ ಎಲ್ಲಾ ವರ್ಗಗಳ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಶುಚಿ-ರುಚಿಯಾದ ಹಾಲು ಮತ್ತು ಹಾಲಿನ ಉತ್ಪನಗಳನ್ನು ನಂದಿನಿ ಬ್ರಾಂಡ್ ಅಡಿಯಲ್ಲಿ ಕಳೆದ 4ದಶಕಗಳಿಂದ ನೀಡುತ್ತಾ ಬಂದಿರುವ ಕೆಎಮ್‌ಎಫ್, ಹೊಸ ವರ್ಷದ ನಿಮಿತ್ಯ ಇಂದಿನಿoದ ಜ. 7ರವರೆಗೆ ರಾಜ್ಯದಾದ್ಯಂತ ನಂದಿನಿ ಸಿಹಿ ಉತ್ಸವವನ್ನು ಆಚರಿಸಲಾಗುತ್ತಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. …
Read More »ಡಿ.25 ರಿಂದ ಜ.10 ರವರೆಗೆ ರೈತರ ಕೃಷಿ ಜಮೀನುಗಳಿಗೆ 6.80 ಟಿಎಮ್‍ಸಿ ನೀರು ಬಿಡುಗಡೆ- ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಜಿಎಲ್‍ಬಿಸಿಗೆ 2400, ಜಿಆರ್‍ಬಿಸಿಗೆ 2000, ಸಿಬಿಸಿ ಕಾಲುವೆಗೆ 550 ಕ್ಯೂಸೆಕ್ಸ್ ನೀರು ಬಿಡುಗಡೆ ಗೋಕಾಕ : ಹಿಡಕಲ್ ಜಲಾಶಯದಿಂದ ಡಿಸೆಂಬರ್ 25 ರಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಈ ಬಗ್ಗೆ …
Read More »ಮತದಾನ ಸಮಯ ಮೊಬೈಲ ನಿಷೇದವಿದ್ದರು ಸಹ ಮತದಾನ ಹಾಕಿದವನು ಪೋಟೊ ತೆಗೆದು ಗ್ರುಪಿನಲ್ಲಿ ಹಾಕಿ ಹುಚ್ಚಾಟ ಮೆರೆದಿದ್ದಾನೆ
ಗೋಕಾಕ: ತಾನು ಮತ ಹಾಕಿದ ಬ್ಯಾಲೇಟ್ ಪೇಪರ ವಾಟ್ಸಾಪ್ ಗ್ರುಪಿನಲ್ಲಿ ಹಾಕಿದ ಪೋಟೋ ವೈರಲ್ ಆದ ಘಟನೆ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ನಡೆದಿದೆ ಪಾಮಲದಿನ್ನಿ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ,ಗ್ರಾಮ ಪಂಚಾಯತಿ ವಾರ್ಡ ನಂಬರ 3, ಎಂಬ ಗ್ರುಪಿನಲ್ಲಿ ತಾನು ಮತ ಚಲಾಯಿಸಿದ ಬ್ಯಾಲೇಟ ಪೇಪರ ಆ ಗ್ರುಪಿನಲ್ಲಿ ಹಾಕಿದ್ದಾನೆ. ಮತದಾನ ಸಮಯ ಮೊಬೈಲ ನಿಷೇದವಿದ್ದರು ಸಹ ಮತದಾನ ಹಾಕಿದವನು ಪೋಟೊ ತೆಗೆದು …
Read More »ಚುನಾವಣೆ ಗೆಲ್ಲಲು ಮಾಟ-ಮಂತ ಮಾಡಿದ ಕುತಂತ್ರಿ ಅಭ್ಯರ್ಥಿಗಳು
ಗೋಕಾಕ್: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಹೇಗಾದರೂ ಮಾಡಿ, ಜನರನ್ನು ಮೋಸಗೊಳಿಸಿ ಗೆಲ್ಲಬೇಕೆಂಬ ಕುತಂತ್ರ ನಡೆಸಿರುವ ಕೆಲವು ಕುತಂತ್ರಿ ಅಭ್ಯರ್ಥಿಗಳು ಮಾಟ-ಮಂತ್ರ ನಡೆಸಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಗೋಕಾಕ ತಾಲೂಕಿನ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಮ್ಮನಕೋಲ ಗ್ರಾಮದಲ್ಲಿ ವಾಮಾಚಾರ ನಡೆಸಿದ್ದಾರೆ. ಗ್ರಾಮದ ವಾರ್ಡ್ ವಿರೋಧಿ ಬಣದ ಅಭ್ಯರ್ಥಿಗಳ ಮನೆ ಎದುರು ಲಿಂಬೆ ಹಣ್ಣು, ತೆಂಗಿನಕಾಯಿ, ಗುಲಾಲು, ದಾರ ಹೀಗೆ ಅನೇಕ ವಸ್ತುಗಳನ್ನು ಇಟ್ಟು ವಾಮಾಚಾರ ನಡೆಸಿದ್ದಾರೆ. ಇದೊಂದು ಗ್ರಾಮದಲ್ಲಿ ಭಯದ …
Read More »ಮೂಡಲಗಿಯಲ್ಲಿ ಅರಭಾವಿ ಮಂಡಲದ ನೂತನ ಬಿಜೆಪಿ ಕಾರ್ಯಾಲಯವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಎಲ್ಲ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವು: ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಡಿ.22 ರಂದು ನಡೆಯುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅರಭಾವಿ ಮತ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಎಲ್ಲ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಇದರಿಂದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿಯೂ ನಮ್ಮ ಗುಂಪು ಅಧಿಕಾರದ ಚುಕ್ಕಾಣ ಹಿಡಿಯಲಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಂಗಳವಾರದಂದು ಪಟ್ಟಣದ ಕರೆಮ್ಮಾದೇವಿ …
Read More »ಗ್ರಾಪಂ ಚುನಾವಣೆ : ರಾಷ್ಟ್ರೀಯ ಪಕ್ಷಗಳ ಚಿಹ್ನೆಗಳ ಬಳಕೆ
ಮೂಡಲಗಿ : ಎಲ್ಲೆಡೆ ಗ್ರಾಪಂ ಚುನಾವಣೆ ಕಾವು ದಿನದಿನಕ್ಕೆ ಏರುತ್ತಿದ್ದು ಆದರೆ ಚುನಾವಣೆಯ ಅಭ್ಯರ್ಥಿಗಳ ಬೆಂಬಲಿಗರು ಚುನಾವಣೆ ಆಯೋಗದ ಕಾನೂನು ಉಲ್ಲಂಘನೆ ಮಾಡಿದ್ದಾರೆ. ತಾಲೂಕಿನ ಕೆಲವು ಗ್ರಾಮಗಳಲ್ಲಿ ಅಭ್ಯರ್ಥಿಗಳ ಬೆಂಬಲಿಗರು ರಾಷ್ಟ್ರೀಯ ಪಕ್ಷಗಳ ಚಿಹ್ನೆಯನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್ ಫೇಸ್ಬುಕ್ ಗಳಲ್ಲಿ ತಮ್ಮ ಅಭ್ಯರ್ಥಿಗಳ ಫೋಟೋ ಹಾಕಿ ಪೋಸ್ಟ್ ಮಾಡುತ್ತಿದ್ದಾರೆ. ಇದು ಕಾನೂನುಬಾಹಿರ ಎಂಬುದು ಗೊತ್ತಿದ್ದರೂ ಕೂಡ ಹೀಗೆ ರಾಷ್ಟ್ರೀಯ ಪಕ್ಷಗಳ ಚಿಹ್ನೆಯನ್ನು ಬಳಸುವುದು ಎಷ್ಟೊಂದು ಸರಿ? …
Read More »