ಮೂಡಲಗಿ : ಎಲ್ಲೆಡೆ ಗ್ರಾಪಂ ಚುನಾವಣೆ ಕಾವು ದಿನದಿನಕ್ಕೆ ಏರುತ್ತಿದ್ದು ಆದರೆ ಚುನಾವಣೆಯ ಅಭ್ಯರ್ಥಿಗಳ ಬೆಂಬಲಿಗರು ಚುನಾವಣೆ ಆಯೋಗದ ಕಾನೂನು ಉಲ್ಲಂಘನೆ ಮಾಡಿದ್ದಾರೆ.
ತಾಲೂಕಿನ ಕೆಲವು ಗ್ರಾಮಗಳಲ್ಲಿ ಅಭ್ಯರ್ಥಿಗಳ ಬೆಂಬಲಿಗರು ರಾಷ್ಟ್ರೀಯ ಪಕ್ಷಗಳ ಚಿಹ್ನೆಯನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್ ಫೇಸ್ಬುಕ್ ಗಳಲ್ಲಿ ತಮ್ಮ ಅಭ್ಯರ್ಥಿಗಳ ಫೋಟೋ ಹಾಕಿ ಪೋಸ್ಟ್ ಮಾಡುತ್ತಿದ್ದಾರೆ.
ಇದು ಕಾನೂನುಬಾಹಿರ ಎಂಬುದು ಗೊತ್ತಿದ್ದರೂ ಕೂಡ ಹೀಗೆ ರಾಷ್ಟ್ರೀಯ ಪಕ್ಷಗಳ ಚಿಹ್ನೆಯನ್ನು ಬಳಸುವುದು ಎಷ್ಟೊಂದು ಸರಿ?
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಚುನಾವಣಾ ಅಧಿಕಾರಿಗಳು ಯಾವ ರೀತಿ ಕ್ರಮ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕು.
Fast9 Latest Kannada News
