ಬೆಳಗಾವಿ: ಬುಧವಾರ ನಗರದ ಧರ್ಮನಾಥ ಭವನದ ಸಭಾಂಗಣದಲ್ಲಿ ಬೆಳಗಾವಿ ಗ್ರಾಮೀಣ, ಖಾನಾಪುರ, ಕಿತ್ತೂರು, ಬೈಲಹೊಂಗಲ ಬಿಜೆಪಿ ಗ್ರಾಮಾಂತರ ಜಿಲ್ಲೆಯ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿ ಜಿಲ್ಲಾ ಸಚಿವ ರಮೇಶ ಜಾರಕಿಹೋಳಿಯವರು ಮಾತನಾಡಿ ಗ್ರಾಮ ಪಂಚಾಯತಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಅತೀ ಹೆಚ್ವು ಗ್ರಾಪಂನ್ನು ವಶಪಡಿಸಿಕೊಳ್ಳಬೇಕಿದೆ ಎಂದರು
ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತ ಮುಖ್ಯಮಂತ್ರಿ, ಪ್ರಧಾನ ಮಂತ್ರಿಯಾಬಹದು ಎಂದರೆ ಅದು ನರೇಂದ್ರ ಮೋದಿ ಅವರು ಎಂದರು.
ಪ್ರತಿಯೊಂದು ಗ್ರಾಪಂನಲ್ಲಿ ನಮ್ಮದೆಯಾದ ಕಾರ್ಯಪಡೆಯನ್ನು ರೂಪಿಸಬೇಕು.ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಎಲ್ಲ ಗ್ರಾಮದಲ್ಲಿ ಸಂಚಾರ ಮಾಡುತ್ತಿದ್ದೇವೆ. ಗ್ರಾಪಂ ಚುನಾವಣೆಯಲ್ಲಿ ಜಾತಿ, ಭಾಷೆ ಮರೆಯಬೇಕು. ಈ ಚುನಾವಣೆ ಬಹಳ ಮಹತ್ವದಿದ್ದೆ. ಬರುವ. 20 ವರ್ಷಷ ಭದ್ರ ಭೂನಾದಿಗೆ ಈ ಚುನಾವಣೆ ಅತ್ಯವಶ್ಯಕವಾಗಿದೆ ಎಂದರು.
ಗ್ರಾಪಂ ಚುನಾವಣೆಯ ಬಿಜೆಪಿ ಅಭ್ಯರ್ಥಿ ಯಾರೆ ಆಗಿರಲಿ ಅವರನ್ನು ಗೆಲ್ಲಿಸುವ ಜವಾಬ್ದಾರಿ ಎಲ್ಲ ಕಾರ್ಯಕರ್ತರದ್ದು, ಬಿಜೆಪಿ ಜಾತಿಯಿಂದ ಕೆಲಸ ಮಾಡುವುದಲ್ಲ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ ಎಂದರು.
ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಎಲ್ಲ ಬಿಜೆಪಿ ನಾಯಕರು ಒಂದಾಗಿದ್ದರು. ಅದೇ ರೀತಿ ಜಿಪಂ ಚುನಾವಣೆಯಲ್ಲಿ 90 ಸ್ಥಾನಗಳ ಪೈಕಿ 85 ಸ್ಥಾನ ಬಿಜೆಪಿ ಗೆಲ್ಲಿಸುವ ಹೊಣೆ ನಮ್ಮ ಮೇಲಿದೆ ಎಂದು ಹೇಳಿದರು.
ಶಾಸಕ ಮಹಾಂತೇಶ ದೊಡ್ಡಗೌಡ, ಕಾಡಾ ಅಧ್ಯಕ್ಷ ಡಾ. ವಿಶ್ವನಾಥ ಪಾಟೀಲ, ರಾಜ್ಯ ಯುವಾಔಮೋರ್ಚಾ ಕಾರ್ಯದರ್ಶಿ ಈರಣ್ಣಾ ಅಂಗಡಿ, ಮಾಜಿ ಸಚಿವ ಶಶಿಕಾಂತ ನಾಯಿಕ, ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಡಾ. ಸಂದೀಪ, ಮಾಜಿ ಶಾಸಕ ಜಗದೀಶ ಮೆಟಗುಡ್ಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.