ಗ್ರಾಪಂ, ಚುನಾವಣೆ ಮುಗಿದ ಬಳಿಕ ಹೊಸ ರೆಷನ್ ಕಾರ್ಡ್ ಶುರ
ಬೆಂಗಳೂರು (ಡಿ.09): ಗ್ರಾಮ ಪಂಚಾಯತ್ ಚುನಾವಣೆ ಮುಗಿದ ಬಳಿಕ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲು ಕ್ರಮ ಕೈಗೊಳ್ಳುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ್ಯ ಭರವಸೆ ನೀಡಿದರು.
ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯರಾದ ಧರ್ಮಸೇನ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೋವಿಡ್ ಹಿನ್ನೆಲೆಯಲ್ಲಿ ಕಳೆದ ವರ್ಷ ಸಲ್ಲಿಸಲಾಗಿದ್ದ 1.88 ಲಕ್ಷ ಅರ್ಜಿಗಳು ವಿಲೇವಾರಿಗೆ ಬಾಕಿ ಉಳಿದಿವೆ. ಪ್ರತಿ ಮನೆಗಳಿಗೆ ಹೋಗಿ ಅಧಿಕಾರಿಗಳು ಪರಿಶೀಲನೆ ನಡೆಸಬೇಕಿದೆ. ಹೀಗಾಗಿ ತಾತ್ಕಾಲಿಕವಾಗಿ ತಡೆಹಿಡಿಯಲಾಗಿತ್ತು. ಗ್ರಾಮ ಪಂಚಾಯತ್ ಚುನಾವಣೆ ಮುಗಿದ ಬಳಿಕ ಬಾಕಿ ಉಳಿದ ಅರ್ಜಿ ವಿಲೇವಾರಿ ಮಾಡಲಾಗುವುದು ಎಂದು ಹೇಳಿದರು.
ಗ್ರಾಮಪಂಚಾಯತಿ ಚುನಾವಣೆ ಮುಗಿದ ಕೂಡಲೇ ಎರಡ್ಮೂರು ತಿಂಗಳಲ್ಲಿ ಕಳೆದ ವರ್ಷ ಸಲ್ಲಿಸಲಾದ ಅರ್ಜಿಗಳನ್ನು ವಿಲೇವಾರಿ ಮಾಡುತ್ತೇವೆ. ನಂತರ ತಕ್ಷಣವೇ ಹೊಸ ಅರ್ಜಿಗಳನ್ನು ಆಹ್ವಾನಿಸಲು ಇಲಾಖೆ ಕ್ರಮಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.
Fast9 Latest Kannada News