Breaking News

ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ BEO.

Spread the love

ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ BEO.

ಅನಾರೋಗ್ಯದ ಹಿನ್ನೆಲೆ ಯಲಹಂಕದ ಕ್ಷೇತ್ರ ಶಿಕ್ಷಣಾಧಿಕಾರಿ ಗುಂಡಿ ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಪಿಸ್ತೂಲ್​​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಯಲಹಂಕದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಓ) ಶವ ಪತ್ತೆಯಾಗಿದೆ. ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ.
ಬಿಇಓ ಕಮಲಾಕರ್ ಅವರ ಶವ ಪತ್ತೆಯಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕೊಡಿಗೆಹಳ್ಳಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ.ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಕಮಲಾಕರ್ ಖಿನ್ನತೆಗೆ ಒಳಗಾಗಿದ್ದರು. ಇಂದು ಮಧ್ಯಾಹ್ನ ಸುಮಾರು 1.30ರ ವೇಳೆ ಮನೆಯಲ್ಲಿ ಯಾರೂ ಇಲ್ಲದಿರುವ ಸಮಯ ನೋಡಿ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.ಶಿವಮೊಗ್ಗದ ತೀರ್ಥಹಳ್ಳಿಯ ಟೆಂಕಬೈಲಿನ ಕಮಲಾಕರ್​​ಗೆ ಓರ್ವ ಮಗನಿದ್ದಾನೆ. ನಾಲ್ಕು ವರ್ಷಗಳಿಂದ ಯಲಹಂಕದಲ್ಲಿ ಬಿಇಓ ಆಗಿ ಕೆಲಸ ಮಾಡಿಕೊಂಡಿದ್ದರು. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಕೊಂಡಿದ್ದಾರೆ.


Spread the love

About Fast9 News

Check Also

ನಿವೃತ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕ ಬಿ , ಎ, ವಂಟಮೂರಿಗೆ ಪತ್ನಿ ವಿಯೋಗ

Spread the loveನಿವೃತ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕ ಬಿ , ಎ, ವಂಟಮೂರಿಗೆ ಪತ್ನಿ ವಿಯೋಗ …

Leave a Reply

Your email address will not be published. Required fields are marked *