ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಹೆಣೆದ ತಂತ್ರಗಾರಿಕೆ ದೆಹಲಿ ಬಿಜೆಪಿ ತೆಕ್ಕೆಗೆ
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರು ಹೆಣೆದ ತಂತ್ರಗಾರಿಕೆಗಳೇ ದೆಹಲಿಯಲ್ಲಿ ನಮ್ಮ ಪಕ್ಷಕ್ಕೆ ಅಧಿಕಾರ ಸಿಕ್ಕಿದೆ. ಜೊತೆಗೆ ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳು ಈ
ಐತಿಹಾಸಿಕ ಗೆಲುವಿಗೆ ಕಾರಣವಾಗಿದೆ. ಕಳೆದ ಎರಡು ಅವಧಿಯಿಂದ ಅಧಿಕಾರದಲ್ಲಿದ್ದ ಆಮ್ ಆದ್ಮಿ ಪಾರ್ಟಿಯ ದುರಾಡಳಿತಕ್ಕೆ ಬೇಸತ್ತು ಅಲ್ಲಿನ ಮತದಾರರು ಆಡಳಿತಾರೂಢ ಪಕ್ಷಕ್ಕೆ ತಕ್ಕ ಪಾಠ ಕಲಿಸಿದ್ದಾರೆ. ೨೫ ವರ್ಷ ಬಳಿಕ ನಮ್ಮ ಪಕ್ಷವು ದೆಹಲಿಯಲ್ಲಿ ಆಡಳಿತ ನಡೆಸಲು ಅಲ್ಲಿನ ಮತದಾರರು ಆಶೀರ್ವಾದ ಮಾಡಿದ್ದಾರೆ. ಅದಕ್ಕಾಗಿ ಸಮಸ್ತ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸುವೆ.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ ಅಧಿಕಾರಕ್ಕೆ ತರಲು ಶ್ರಮಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಹಾಗೂ ದೆಹಲಿ ಮಟ್ಟದ ಎಲ್ಲ ನಾಯಕರುಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.
*-ಬಾಲಚಂದ್ರ ಜಾರಕಿಹೊಳಿ*
*ಶಾಸಕರು ಮತ್ತು ಅಧ್ಯಕ್ಷರು, ಬೇಮ್ಯುಲ್*