Breaking News

ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ*

Spread the love

ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ*

*ಬೆಂಗಳೂರು* : ರಾಷ್ಟ್ರದ ಉನ್ನತಿ ಮತ್ತು ಪ್ರಗತಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಅನನ್ಯವಾಗಿದ್ದು, ಮೋದಿಯವರ ದೂರದೃಷ್ಟಿಯ ನಾಯಕತ್ವದಿಂದಾಗಿ ಇಡೀ ಪ್ರಪಂಚವೇ ನಮ್ಮತ್ತ ತಿರುಗಿ ನೋಡುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.
ಇಲ್ಲಿಯ ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಜರುಗಿದ 76ನೇ ಸ್ವಾತಂತ್ರ್ಯ ವರ್ಷದ ಆಜಾದಿ ಕಾ ಅಮೃತ್ ಮಹೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪ್ರಧಾನಿಗಳ ಸಮರ್ಥ ನಾಯಕತ್ವದಲ್ಲಿ ಭಾರತ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ ಎಂದು ಅವರು ಹೇಳಿದರು.
ಕೆಎಂಎಫ್‍ನ 14 ಒಕ್ಕೂಟಗಳು ಸೇರಿ ರಾಜ್ಯದ 14500 ಹಾಲು ಉತ್ಪಾದಕರ ಸಹಕಾರಿ ಸಂಘಗಳಲ್ಲಿ ಸ್ವಾತಂತ್ರ್ಯ ಅಮೃತ್ ಮಹೋತ್ಸವವನ್ನು ಅತೀ ಸಡಗರ-ಸಂಭ್ರಮದಿಂದ ಆಚರಿಸಲಾಗಿದೆ. ಜೊತೆಗೆ ಎಲ್ಲ ಸಂಘಗಳಲ್ಲಿ ಅಮೃತ್ ಮಹೋತ್ಸವದ ನಿಮಿತ್ಯ ಸಾಕಷ್ಟು ದೇಶಪ್ರೇಮ ಬಿಂಬಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕೆಎಂಎಫ್ ದೊಡ್ಡ ಸಂಸ್ಥೆಯಾಗಿ ಬೆಳೆಯಲು ಆಸರೆಯಾಗಿ ನಿಂತಿರುವ ರೈತ ಸಮೂಹದ ಬೆಳವಣಿಗೆಗಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಲಾಗಿದೆ. ಇಡೀ ಭಾರತದಲ್ಲಿಯೇ ಕೆಎಂಎಫ್ ನಂ.1 ಸಂಸ್ಥೆಯನ್ನಾಗಿ ರೂಪಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.
ಕೆಎಂಎಫ್‍ನ ನಂದಿನಿ ಉತ್ಪನ್ನಗಳನ್ನು ಎತ್ತರಕ್ಕೆ ಏರಿಸಲು ಅವಿರತವಾಗಿ ಶ್ರಮಿಸಲಾಗುತ್ತಿದೆ. ರೈತರು, ಗ್ರಾಹಕರು, ನೌಕರರ ಒಳತಿಯೇ ನಮ್ಮ ಧ್ಯೇಯವಾಗಿದ್ದು, ಎಲ್ಲರು ಸುಖ, ಶಾಂತಿ, ನೆಮ್ಮದಿಯ ಬದುಕಿಗಾಗಿ ನಾವೆಲ್ಲರೂ ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳೋಣ. ಕೆಎಂಎಫ್ ಉನ್ನತಿಯೇ ನಮ್ಮ ಪ್ರಮುಖ ಧ್ಯೇಯ ಎಂದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ಅಮೃತ್ ಮಹೋತ್ಸವದ ಶುಭಾಷಯಗಳನ್ನು ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಕೆಎಂಎಫ್‍ನ ನಿರ್ದೇಶಕರು, ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ, ವಿತ್ತ ಮತ್ತು ಆಡಳಿತ ನಿರ್ದೇಶಕ ರಮೇಶ ಕೊಣ್ಣೂರ, ಉತ್ಪಾದನೆ ಮತ್ತು ಗುಣ ಭರವಸೆ ನಿರ್ದೇಶಕ ಮುನಿರಡ್ಡಿ, ಸಲಹೆಗಾರ ಬಿ.ಎಂ.ಸುರೇಶ ಕುಮಾರ್, ಮಾರುಕಟ್ಟೆ ವಿಭಾಗದ ಅಧಿಕಾರಿ ರಘುನಂದನ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Fast9 News

Check Also

ಈ ಜಗತ್ತು ನಿಂತಿರುವುದೇ ದೇವರಿಂದ* *ದೇವರ ನಾಮ- ಸ್ಮರಣೆ ಮಾಡಿದರೆ ಕಷ್ಟ- ಕಾರ್ಪಣ್ಯಗಳು ದೂರ- ಶಾಸಕ ಬಾಲಚಂದ್ರ ಜಾರಕಿಹೊಳಿ*

Spread the love*ಕಪರಟ್ಟಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರಿಂದ ಶ್ರೀದೇವಿ ಮತ್ತು ಭರಮ ದೇವರ ದೇವಸ್ಥಾನಗಳ ಉದ್ಘಾಟನೆ* *ಈ ಜಗತ್ತು ನಿಂತಿರುವುದೇ …

Leave a Reply

Your email address will not be published. Required fields are marked *