Breaking News

ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ*

Spread the love

*ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ*

ಗೋಕಾಕ್- ರಾಜ್ಯದ ಹಿರಿಯ ಶಾಸಕ, ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಕತ್ತಿ ಅವರ ನಿಧನದಿಂದ ಮುತ್ಸದ್ದಿ, ಕ್ರಿಯಾಶೀಲ ವ್ಯಕ್ತಿತ್ವದ ಆಪ್ತ ಸ್ನೇಹಿತನೊಬ್ಬನನ್ನು ಕಳೆದುಕೊಂಡಿದ್ದೇನೆ. ನನ್ನ ಮತ್ತು ಕತ್ತಿ ಅವರ ಮಧ್ಯೆ ಸುಮಾರು ೨ ದಶಕದ ಒಡನಾಟವೂ ಎಂದೂ ಮರೆಯದ ಘಟನೆ ಎಂದೂ ಅವರು ತಿಳಿಸಿದ್ದಾರೆ.
ಉತ್ತಮ ಹೃದಯವಂತಿಕೆಯ ವ್ಯಕ್ತಿತ್ವ. ನೇರ ಮಾತುಗಳು. ನಿಷ್ಠೂರತನವೂ ಅವರಲ್ಲಿತ್ತು. ಇವರ ಅಕಾಲಿಕ ನಿಧನದ ಸುದ್ದಿ ತಿಳಿದು ನನಗೆ ದಿಗ್ಭ್ರಮೆಯಾಯಿತು. ರಾಜ್ಯದಲ್ಲಿಯೇ ಅತೀ ಹಿರಿಯ ಶಾಸಕರಾಗಿದ್ದರು. ಅಭಿವೃದ್ಧಿಪರ ಚಿಂತನೆಗಳು ಮನೆ ಮಾತಾಗಿದ್ದವು. ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಸಹಕಾರಿ ಕ್ಷೇತ್ರಕ್ಕೂ ಇವರ ಕೊಡುಗೆ ಅನನ್ಯವಾಗಿದೆ. ಉತ್ತಮ ಗೆಳೆಯ, ಆಪ್ತ ಒಡನಾಡಿಯನ್ನು ಕಳೆದುಕೊಂಡು ದು:ಖಿತನಾಗಿದ್ದೇನೆ ಎಂದು ಸಂತಾಪದಲ್ಲಿ ತಿಳಿಸಿದ್ದಾರೆ.
ಉಮೇಶ್ ಕತ್ತಿಯವರ ಅಗಲಿಕೆಯ ದು:ಖವನ್ನು ಸಹಿಸುವ ಶಕ್ತಿಯನ್ನು ಆ ಪರಮಾತ್ಮನು ಅವರ ಕುಟುಂಬ ವರ್ಗಕ್ಕೆ, ಅವರ ಅಭಿಮಾನಿಗಳಿಗೆ ನೀಡಲೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಾರ್ಥಿಸಿದ್ದಾರೆ.


Spread the love

About Fast9 News

Check Also

ದಂಡಾಪೂರ ಗ್ರಾಮದಲ್ಲಿ 6.11 ಕೋಟಿ ರೂಪಾಯಿ ವೆಚ್ಚದ ಶೈಕ್ಷಣಿಕ ಕಾಮಗಾರಿಗಳನ್ನು ನೆರವೇರಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ*

Spread the love*ದಂಡಾಪೂರ ಗ್ರಾಮದಲ್ಲಿ 6.11 ಕೋಟಿ ರೂಪಾಯಿ ವೆಚ್ಚದ ಶೈಕ್ಷಣಿಕ ಕಾಮಗಾರಿಗಳನ್ನು ನೆರವೇರಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ* …

Leave a Reply

Your email address will not be published. Required fields are marked *