Breaking News

ರೈತ ಮಹಿಳೆಯರ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸಿ : ಪ್ರಧಾನಿ ನರೇಂದ್ರ ಮೋದಿ.*

Spread the love

*ರೈತ ಮಹಿಳೆಯರ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸಿ : ಪ್ರಧಾನಿ ನರೇಂದ್ರ ಮೋದಿ.*

*ಗ್ರೇಟರ್ ನೋಯಿಡಾ (ಉತ್ತರ ಪ್ರದೇಶ)* : ಕಳೆದ ಐದು ದಶಕಗಳಿಂದ ರೈತರ ಸೇವೆ ಮಾಡುತ್ತಿರುವ ಕೆಎಂಎಫ್‍ನ ಕಾರ್ಯ ಶ್ಲಾಘನೀಯವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದರು.
ಉತ್ತರಪ್ರದೇಶದ ಗ್ರೇಟರ್ ನೋಯಿಡಾ ನಗರದಲ್ಲಿ ಸೋಮವಾರದಿಂದ ಆರಂಭಗೊಂಡಿರುವ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್‍ನ ನಂದಿನಿ ಉತ್ಪನ್ನಗಳ ಮಳಿಗೆಗೆ ಭೇಟಿ ನೀಡಿದ ಅವರು, ಸಹಕಾರಿ ವಲಯದಲ್ಲಿ ಕರ್ನಾಟಕದ ಕೆಎಂಎಫ್ ಉತ್ತಮ ಕಾರ್ಯ ಮಾಡುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.
ಹೈನುಗಾರಿಕೆಯನ್ನೇ ಅವಲಂಬಿತರಾಗಿರುವ ರೈತ ಸಮುದಾಯ ಅದರಲ್ಲೂ ವಿಶೇಷವಾಗಿ ರೈತ ಮಹಿಳೆಯರ ಆರ್ಥಿಕ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಸಂದರ್ಭದಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಲಹೆ ನೀಡಿದರು.
ಕೆಎಂಎಫ್‍ನ ಕಾರ್ಯಚಟುವಟಿಕೆಗಳ ಬಗ್ಗೆ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಧಾನಿಗಳಿಗೆ ವಿಸ್ತ್ರತ ಮಾಹಿತಿ ನೀಡಿದರು. ಕರ್ನಾಟಕದಲ್ಲಿನ 24184 ಹಳ್ಳಿಗಳ ಸುಮಾರು 15043 ಹಾಲು ಉತ್ಪಾದಕರ ಸಹಕಾರಿ ಸಂಘಗಳನ್ನು ಹೊಂದಿದ್ದು, 16 ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳನ್ನು ಹೊಂದಿರುವ ಸಹಕಾರಿ ಸಂಸ್ಥೆಯಾಗಿದೆ. 26 ಲಕ್ಷ ಹಾಲು ಉತ್ಪಾದಕ ಸದಸ್ಯರಿದ್ದು, 10 ಲಕ್ಷ ಹಾಲು ಸರಬರಾಜುದಾರರು ಇದ್ದು, 91.88 ಲಕ್ಷ ಕೆಜಿ ಗರಿಷ್ಠ ಶೇಖರಣೆ ಹೊಂದಿದೆ. ಪ್ರತಿದಿನ 30 ಕೋಟಿ ರೂ. ರೈತರಿಗೆ ಹಣ ಪಾವತಿ ಮಾಡುತ್ತಿದ್ದು, 170ಕ್ಕೂ ಅಧಿಕ ನಂದಿನಿ ಹಾಲಿನ ಉತ್ಪನ್ನಗಳನ್ನು ಕೆಎಂಎಫ್ ಉತ್ಪಾದಿಸುತ್ತಿದೆ ಎಂದು ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿ ಒದಗಿಸಿದರು.
ಕರ್ನಾಟಕ ಹಾಲು ಮಹಾಮಂಡಳವು ನಂದಿನಿ ಬ್ರಾಂಡ್ ಬಗ್ಗೆ ಅಂತರಾಷ್ಟ್ರೀಯ ಮಾರುಕಟ್ಟೆಗೆ ಪರಿಚಯಿಸಲು ವಿಶ್ವ ಡೇರಿ ಶೃಂಗಸಭೆಯು ಉತ್ತಮ ವೇದಿಕೆಯಾಗಿದ್ದು, ಬ್ರಾಂಡ್ ಮೌಲ್ಯವರ್ಧನೆ ಮತ್ತು ವಹಿವಾಟು ವಿಸ್ತರಣೆ ಸದುದ್ದೇಶದಿಂದ ಈ ವಿಶ್ವ ಡೇರಿ ಶೃಂಗ ಸಭೆ ಕಾರ್ಯಾಗಾರದಲ್ಲಿ ನಂದಿನಿ ಉತ್ಪನ್ನಗಳ ಪ್ರದರ್ಶನದ ಆಕರ್ಷಕ ಮಳಿಗೆಯನ್ನು ತೆರೆದಿದೆ.
ಕೆಎಂಎಫ್ ಆಡಳಿತ ಮಂಡಳಿ ಸದಸ್ಯರು, ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮತ್ತು ಸದಸ್ಯರು, ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ, ಒಕ್ಕೂಟಗಳ ಕಾರ್ಯನಿರ್ವಾಹಕ ನಿರ್ದೇಶಕರು ಮತ್ತು ಕಹಾಮ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.


Spread the love

About Fast9 News

Check Also

ಕನಕದಾಸರ ೫೩೭ ನೇ ಜಯಂತಿಗೆ ಶುಭ ಕೋರಿದ ಶಾಸಕ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.*

Spread the love*ಕನಕದಾಸರ ೫೩೭ ನೇ ಜಯಂತಿಗೆ ಶುಭ ಕೋರಿದ ಶಾಸಕ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.* ಗೋಕಾಕ- ನಾಡಿನಾದ್ಯಂತ …

Leave a Reply

Your email address will not be published. Required fields are marked *