ಮೊಜು ಮಸ್ತಿ ಮಾಡಲು ಹೋದವರು ನೀರು ಪಾಲಾದರು.
ಮೋಜು ಮಸ್ತಿ ಮಾಡಲು ಬಂದಿದ್ದ ನಾಲ್ವರು ಯುವಕರು ನೀರುಪಾಲಾದ ಘಟನೆ ಬೆಂಗಳೂರು ಗ್ರಾ. ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರದ ಕೆರೆಯಲ್ಲಿ
ನಡೆದಿದೆ. ಬೆಂಗಳೂರಿನ ಆರ್.ಟಿ.ನಗರದ ಶೇಖ್,ತೋಹಿದ್, ಶಾಹಿದ್, ಫೈಜಲ್ ಮೃತರು. ನಂದಿಬೆಟ್ಟಕ್ಕೆ ತೆರಳಿದ್ದ ಯುವಕರು ಕೆರೆಯಲ್ಲಿ ಈಜಲು ಇಳಿದಿದ್ದು,ಮುಳುಗಿ ಸಾವನ್ನಪ್ಪಿದ್ದಾರೆ. ಇಬ್ಬರ ಮೃತದೇಹವನ್ನು ಅಗ್ನಿಶಾಮಕ ದಳ ಹೊರತೆಗೆದಿದ್ದು, ಮತ್ತಿಬ್ಬರ ಮೃತದೇಹಕ್ಕಾಗಿ ಹುಡುಕಾಟ ಮುಂದುವರೆಸಲಾಗಿದೆ.
Fast9 Latest Kannada News