ಬೆಳಗಾವಿಯಲ್ಲಿ ಕೆಎಸ್‍ಆರ್‍ಟಿಸಿ ನೌಕರರ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ ಮೊದಲ ಬಲಿ
ನಿನ್ನೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಸ್ ಚಾಲಕನೊರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ.
ವಡಗಾವಿಯ ನಿವಾಸಿ ದತ್ತಾ ಮಂಡೋಳ್ಕರ್(58) ಮೃತ ಬಸ್ ಚಾಲಕನಾಗಿದ್ದಾನೆ. ಸರ್ಕಾರಿ ನೌಕರನ್ನಾಗಿ ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾಂಧ್ಯಂತ ಪ್ರತಿಭಟನೆ ನಡೆಯುತ್ತಿದೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕೆಎಸ್‍ಆರ್‍ಟಿಸಿ ಸಿಬ್ಬಂದಿ ಪ್ರತಿಭಟನೆಯಲ್ಲಿ ನಿರತರಾಗಿದ್ದರು. ನಿನ್ನೆ ಶುಕ್ರವಾರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮೃತ ಬಸ್ ಚಾಲಕ ದತ್ತಾ ಮಂಡೋಳ್ಕರ್(58)ಗೆ ಎದೆ ನೋವು ಕಾಣಿಸಿಕೊಂಡಿತ್ತು. ಎದೆ ನೋವು ಕಾಣಿಸಿಕೊಂಡಿದ್ದರಿಂದ ರಾತ್ರಿಯೇ ಮನೆಗೆ ತೆರಳಿದ್ದ.
ಆದ್ರೆ ಹೃದಯಾಘಾತವಾಗಿ ಬಸ್ ಚಾಲಕ ಕೊನೆಯುಸಿರೆಳೆದಿದ್ದಾರೆ. ಬೆಳಗಾವಿಯ 2ನೇ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತ ಬಸ್ ಚಾಲಕ ದತ್ತಾ ಮಂಡೋಳ್ಕರ್ ನಿನ್ನೆಯವರೆಗೂ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇವರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿದೆ.
Fast9 Latest Kannada News