FDA, SDA ಅಬ್ಯರ್ಥಿಗಳ ಆದೇಶಕ್ಕೆ ಒಪ್ಪಿಗೆ ಸೂಚಿಸಲು ಅಬ್ಯರ್ಥಿಗಳಿಂದ ಸಚಿವರಿಗೆ ಮನವಿ
2017 ನೇ ಸಾಲಿನ ಎಸ್.ಡಿ.ಎ.ಹಾಗೂ ಎಫ್, ಡಿ,ಎ ಹುದ್ದೆಗಳಿಗೆ ನೇಮಕಾತಿ ಆದೇಶ ನೀಡಲು ಆರ್ಥಿಕ ಇಲಾಖೆಗೆ ಒಪ್ಪಿಗೆ ಸೂಚಿಸುವಂತೆ ಸಚಿವ ರಮೇಶ ಜಾರಕಿಹೊಳಿ ಅವರಿಗೆ SDA ಹಾಗೂ FDA ಅಭ್ಯರ್ಥಿಗಳು ಮನವಿ ಮಾಡಿಕೊಂಡರು.
2017 ನೇ ಸಾಲಿನ SDA ಹಾಗೂ FDA ಪರೀಕ್ಷೆಯಲ್ಲಿ ಆಯ್ಕೆಗೊಂಡು ನಿಯಮಾನುಸಾರ ಎಲ್ಲ ಮೂಲ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ಮುಗಿದಿದ್ದು, ಹಾಗೂ ಆರ್ಥಿಕ ಇಲಾಖೆಯು ನೇಮಕ ಪ್ರಕ್ರಿಯೆಯನ್ನು ತಡೆಹಿಡಿದಿದೆ. ಆದರೇ ಇದೇ ಅಧಿಸೂಚನೆಯಲ್ಲಿ ಆಯ್ಕೆಯಾದ ನ್ಯಾಯಾಂಗ ಇಲಾಖೆಯ 428 ಅಭ್ಯರ್ಥಿಗಳಿಗೆ ಈಗಾಗಲೇ ನೇಮಕಾತಿ ಆದೇಶವನ್ನು ನೀಡಲಾಗಿದೆ. ಇನ್ನೂಳಿದ 44 ಇಲಾಖೆಯ 1414 ಅಭ್ಯರ್ಥಿಗಳಿಗೆ ಆದೇಶ ಪ್ರತಿ ನೀಡಲು ಆರ್ಥಿಕ ಇಲಾಖೆಯು ಒಪ್ಪಿಗೆ ನೀಡಿರುವುದಿಲ್ಲ.
ಆದ್ದರಿಂದ ಇನ್ನೂಳಿದ ಇಲಾಖೆಯ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪ್ರತಿ ನೀಡುವಂತೆ ಆರ್ಥಿಕ ಇಲಾಖೆಗೆ ನಿರ್ದೇಶನ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಅವರಿಗೆ ಮನವಿ ನೀಡಿ ವಿನಂತಿಸಿಕೊಂಡಿದ್ದಾರೆ.
Fast9 Latest Kannada News