ಗೋಕಾಕ: ಶಿಕ್ಷಕರು ತಮ್ಮ ಕರ್ತವ್ಯದ ಜೊತೆಗೆ ಸಂಘದ ಪ್ರಗತಿಗೂ ಶ್ರಮಿಸಿ, ಶಿಕ್ಷಕರ ಸಂಘವನ್ನು ಮಾದರಿ ಸಂಘವನ್ನಾಗಿ ರೂಪಿಸಲು ಅರಭಾವಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು.
ಶನಿವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ನೀಡಿದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಕರು ರಾಷ್ಟ್ರದ ಶಿಲ್ಪಿಗಳಾಗಿದ್ದು, ಸಮಾಜವನ್ನು ಬದಲಿಸುವ ಶಕ್ತಿ ಶಿಕ್ಷಕರಿಗಿದೆ ಎಂದು ತಿಳಿಸಿದರು.
ನೂತನವಾಗಿ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳು ತಮ್ಮ ಒಗ್ಗಟ್ಟಿನ ಶಕ್ತಿಯನ್ನು ಪ್ರದರ್ಶಿಸಬೇಕು. ಈ ಮೂಲಕ ಸಂಘದ ಅಭಿವೃದ್ದಿಗೆ ನಾಂದಿ ಹಾಡಬೇಕು. ತಮ್ಮಲ್ಲಿಯ ಸಣ್ಣ-ಪುಟ್ಟ ವ್ಯತ್ಯಾಸಗಳನ್ನು ಬದಿಗಿಟ್ಟು ಶಿಕ್ಷಕರ ಸಂಘದ ಅಭ್ಯುದಯಕ್ಕೆ ದುಡಿಯಬೇಕು. ಶಿಕ್ಷಕರ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಜವಾಬ್ದಾರಿಯನ್ನು ನಿರ್ವಹಿಸಬೇಕು. ಸರ್ಕಾರದಿಂದ ಸಿಗಬೇಕಿರುವ ಎಲ್ಲ ಸೌಲಭ್ಯಗಳನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮೂಲಕ ದೊರಕಿಸಿಕೊಡುವ ಆಶ್ವಾಸನೆ ನೀಡಿದರು.
ಸಂಘದ ನೂತನ ಅಧ್ಯಕ್ಷ ಎಲ್.ಎಮ್.ಬಡಕಲ್ ಅವರು ಇದೇ ಸಂದರ್ಭದಲ್ಲಿ ನಾಗಪ್ಪ ಶೇಖರಗೋಳ ಅವರನ್ನು ಸತ್ಕರಿಸಿದರು.
ಈ ಸಂದರ್ಭದಲ್ಲಿ ಆರ್.ಎಮ್.ಮಹಾಲಿಂಗಪೂರ, ಎಮ್.ವಾಯ್.ಸಣ್ಣಕ್ಕಿ, ಎ.ಪಿ.ಪರಸನ್ನವರ, ಬಿ.ಎಲ್.ನಾಯಿಕ, ವಾಯ್.ಡಿ.ಜಲ್ಲಿ, ಎಮ್.ಜಿ.ಮಾವಿನಗಿಡದ, ಸಂತೋಷ ಪಾಟೀಲ, ಶಾನವಾಜ ದಬಾಡಿ, ಎಮ್.ಎಮ್.ಕಳಸನ್ನವರ, ಎಫ್.ಡಿ.ಹಂಚಿನಾಳ ಮುಂತಾದವರು ಉಪಸ್ಥಿತರಿದ್ದರು.
ಫೋಟೋ 26 ಜಿಕೆಕೆ-3
ಗೋಕಾಕ: ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರನ್ನು ಸತ್ಕರಿಸುತ್ತಿರುವುದು.
Check Also
ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನವಾಗಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭ
Spread the love ಗೋಕಾಕ : ತಾಲೂಕಿನ ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು …