ಗೋಕಾಕ ಜಿಲ್ಲೆಆಗುವುದು ಪಕ್ಕಾ..??? : ಸಚಿವ ರಮೇಶ ಜಾರಕಿಹೊಳಿ
ಸಿದ್ಧರಾಮಯ್ಯ ಸಿಎಂ ಆಗಿದ್ದ ವೇಳೆ ಗೋಕಾಕ ಮತ್ತು ಚಿಕ್ಕೋಡಿ ಜಿಲ್ಲೆ ರಚನೆ ಬಗ್ಗೆ ನಿರ್ಣಯ ಮಾಡಲಾಗಿತ್ತು.ಆದರೆ ಬೈಲಹೊಂಗಲದವರು ನಮಗೂ ಪ್ರತ್ಯೇಕ ಜಿಲ್ಲೆ ಕೊಡಿ ಅಂತ ಕೇಳಿದ್ದರಿಂದ ಈ ವಿಚಾರ ಅಷ್ಟಕ್ಕೆ ನಿಂತಿದೆ. ಹೊಸ ತಾಲೂಕು ರಚನೆ ಮಾಡಿ ಆ ನಂತರ ಗೋಕಾಕ ಪ್ರತ್ಯೇಕ ಜಿಲ್ಲೆ ರಚನೆಗಾಗಿ ಪ್ರಯತ್ನಿಸುತ್ತೆನೆಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸೋಮವಾರದಂದು ಗೋಕಾಕ ಜಿಲ್ಲಾ ಹೋರಾಟ ಸಮಿತಿ ಪದಾಧಿಕಾರಿಗಳು ಗೋಕಾಕ ಪಟ್ಟಣದ ಶ್ರೀ ಬಸವೇಶ್ವರ ವೃತ್ತದಿಂದ ಜಲಸಂನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರ ಕಚೇರಿ ವರೆಗೆ ರ್ಯಾಲಿ ನಡೆಸಿ ಗೋಕಾಕ ಜಿಲ್ಲೆ ಮಾಡುವಂತೆ ಆಗ್ರಹಿಸಿ ಹೋರಾಟಗಾರರು ಘೋಷಣೆ ಕೂಗಿದರು.
ನಂತರ ಹೋರಾಟಗಾರರು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ರಮೇಶ ಜಾರಕಿಹೊಳಿಯವರು ಹೊಸ್ ತಾಲೂಕುಗಳನ್ನು ಪುನರ್ ವಿಂಗಡನೆ ಮಾಡಿ ಸಮಸ್ಯೆಗಳನ್ನು ಪರಿಹರಿಸಿ 5-6 ತಿಂಗಳಲ್ಲಿ ಗೋಕಾಕನ್ನು ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರಯತ್ನಿಸುತ್ತೇನೆಂದರು.
ಬಜೆಟ ಅಧಿವೇಶನ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿಗಳನ್ನು ಭೇಟಿಯಾಗೋಣ ಎಂದು ಹೋರಾಟಗಾರರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗೋಕಾಕನ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ, ಹೋರಾಟಗಾರ ರಾಜೇಂದ್ರ ಸಣ್ಣಕ್ಕಿ,ಬಸವರಾಜ ಹೀರೆಮಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.