Breaking News

ಗ್ರಾಮದ ಸ್ವಚ್ಚತೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತ್ಯವ್ಯ: ಬಂತಿ

Spread the love

ಗ್ರಾಮದ ಸ್ವಚ್ಚತೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತ್ಯವ್ಯ: ಬಂತಿ

ಘಟಪ್ರಭಾ: ಗ್ರಾಮದ ಪ್ರತಿಯೊಬ್ಬ ಪ್ರಜೆಯೂ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಲು ಶ್ರಮಿಸಬೇಕು ಎಂದು ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ ಪ್ರಾಥಮಿಕ ಶಾಲೆಯ ಅಧ್ಯಕ್ಷ ಜ್ಯೋತ್ತೇಪ್ಪ ಬಂತಿ ಹೇಳಿದರು.

ಅವರು ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ, ಶ್ರೀ ಶಿವಶರಣ ಹರಳಯ್ಯ ಯುವಕ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಗೋಕಾಕ ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ ಪ್ರಾಥಮಿಕ ಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ” ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮ”ವನ್ನು ಸಸಿಗೆ ನೀರು ಉಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಮನುಷ್ಯನ ಆರೋಗ್ಯ ಉತ್ತಮವಾಗಿರಬೇಕಾದರೆ ತಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ನೆಹರು ಯುವ ಕೇಂದ್ರದ ಗೋಕಾಕ ತಾಲೂಕಿನ ಎನ್ ಎಸ್ ವಿ ಸರಸ್ವತಿ ಮಾದರ, ಕರವೇ ಗಜಸೇನೆ ಗೋಕಾಕ ತಾಲೂಕಾಧ್ಯಕ್ಷ ರಾಜು ನಿಲಜಗಿ, ಯುವ ಸಂಘಗಳ ಒಕ್ಕೂಟದ ತಾಲೂಕಾಧ್ಯಕ್ಷ ವಿಠ್ಠಲ ಕರೋಶಿ, ಅಕ್ಕಮಹಾದೇವಿ ಜೋಕಾನಟ್ಟಿ, ದೈಹಿಕ ಶಿಕ್ಷಕ ಮಹಾದೇವ ಕಡಕೋಳ, ಎಸ್.ಎಸ್.ದೊಡಮನಿ ಸೇರಿದಂತೆ ಯುವಕ ಸಂಘದ ಸದಸ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪ್ರತಿಜ್ಞೆ ವಿಧಿ ವಿಧಿಸಲಾಯಿತು. ನಂತರ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.


Spread the love

About Fast9 News

Check Also

ಈ ಜಗತ್ತು ನಿಂತಿರುವುದೇ ದೇವರಿಂದ* *ದೇವರ ನಾಮ- ಸ್ಮರಣೆ ಮಾಡಿದರೆ ಕಷ್ಟ- ಕಾರ್ಪಣ್ಯಗಳು ದೂರ- ಶಾಸಕ ಬಾಲಚಂದ್ರ ಜಾರಕಿಹೊಳಿ*

Spread the love*ಕಪರಟ್ಟಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರಿಂದ ಶ್ರೀದೇವಿ ಮತ್ತು ಭರಮ ದೇವರ ದೇವಸ್ಥಾನಗಳ ಉದ್ಘಾಟನೆ* *ಈ ಜಗತ್ತು ನಿಂತಿರುವುದೇ …

Leave a Reply

Your email address will not be published. Required fields are marked *