ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಕೆಲಸ ನಿರ್ವಹಿಸಿ:ಶಾಸಕ ಬಾಲಚಂದ್ರ ಜಾರಕಿಹೋಳಿ
ಮೂಡಲಗಿ: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಕೆಲಸ ನಿರ್ವಹಿಸಿಕೊಂಡು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು. ಅಗತ್ಯ ಬಿದ್ದರೆ ಕುಡಿಯುವ ನೀರಿಗಾಗಿ ಟ್ಯಾಂಕರಗಳ ಮೂಲಕ ವ್ಯವಸ್ಥೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಭವನದಲ್ಲಿ ಶನಿವಾರದಂದು ಜರುಗಿದ ಮೂಡಲಗಿ ತಾಲೂಕಾ ಮಟ್ಟದ ಟಾಸ್ಕಪೋರ್ಸ್ ಕಮೀಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆಯು ಕೈಕೊಟ್ಟಿದರಿಂದ್ದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಧಿಕಾರಿಗಳು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಅರಭಾವಿ ಕ್ಷೇತ್ರದಲ್ಲಿ ಈಗಾಗಲೇ ಅಷ್ಟೇನೂ ಪರಿಸ್ಥಿತಿ ಹದಗೆಟ್ಟಿಲ್ಲ, ಆದರೂ ಕೆಲವಡೆ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುತ್ತಿದೆ, ಅಂತಹ ಗ್ರಾಮಗಳ ಪಟ್ಟಿಯನ್ನು ತಯಾರಿಸಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸೌಕರ್ಯವನ್ನು ಒದಗಿಸಬೇಕು, ಬೋರವೇಲಕ್ಕಿತಂಲೂ ಟ್ಯಾಂಕರಗಳ ಮೂಲಕವೇ ನೀರನ್ನು ಸರಬರಾಜು ಮಾಡಬೇಕು,ಈಗಾಗಲೇ ಪ್ರತಿ ಗ್ರಾಮ ಪಂಚಾಯತಗಳಲ್ಲಿ ಸುಮಾರು ಐದು ಸಾವಿರ ಲೀಟರ ಸಾಮರ್ಥ್ಯದ ಟ್ಯಾಂಕರಗಳು ಇರುವದರಿಂದ ಸಾರ್ವಜನಿಕರ ಅನುಕೂಲಕ್ಕಾಗಿ ತಕ್ಷಣವೇ ಕಾರ್ಯ ಪ್ರವರ್ತರಾಗುವಂತೆ ಸೂಚನೆ ನೀಡಿದ ಅವರು. ಜುಲೈ ನಾಲ್ಕರತನಕ ಪರಿಸ್ಥಿಯನ್ನು ಅರಿತುಕೊಂಡು ಮುಂದಿನ ಯೋಜನೆಗಳನ್ನು ರೂಪಿಸಲಾಗುವುದು ಎಂದು ಹೇಳಿದರು.
ನಿಗದಿತ ಅವಧಿಯಲ್ಲಿ ಮಳೆಯಾಗದೇ ಜಲಾಶಯಗಳು ಖಾಲಿಯಾಗಿವೆ. ನೀರಿನ ಮಟ್ಟ ತೀವೃ ಕುಸಿತಗೊಂಡಿವೆ. ಬೇರೆ ಬೇರೆ ತಾಲೂಕಿಗೆ ಹೋಲಿಸಿದರೆ ನಮ್ಮ ತಾಲೂಕಿಗೆ ಕುಡಿಯುವ ನೀರಿನ ಪರಿಸ್ಥಿತಿ ಪ್ರಸಕ್ತ ಸನ್ನಿವೇಶದಲ್ಲಿ ಉದ್ಬವವಾಗದಿದ್ದರೂ ಮುಂದಿನ ದಿನಗಳಲ್ಲಿ ವರುಣನು ಕೈಕೊಟ್ಟರೆ ಕುಡಿಯುವ ನೀರಿನ ಸಮಸ್ಯೆ ಜಟೀಲವಾಗಬಹುದು ಪರಿಸ್ಥಿತಿಯನ್ನು ಈಗಲೇ ಅರಿತುಕೊಂಡು ಸಾರ್ವಜನಿಕರ ಒಳಿತಿಗಾಗಿ ಯಾವುದೇ ನೆಪವನ್ನು ಹೇಳದೇ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಸಲು ಅಧಿಕಾರಿಗಳು ಮುಂದೆ ಬರುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸೂಚನೆ ನೀಡಿದರು.
ತಹಶೀಲದಾರ ಪ್ರಶಾಂತ ಚನಗೊಂಡ, ತಾಪಂ ಇಒ ಎಫ್.ಜಿ ಚಿನ್ನನವರ ಸೇರಿದಂತೆ ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.