ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ
ನೂತನ ಅಧ್ಯಕ್ಷ ಚನ್ನಪ್ಪ ಕೌಜಲಗಿ, ಮಹಿಳಾ ಘಟಕ ಅಧ್ಯಕ್ಷೆ ಮಹಾದೇವಿ ಉಪ್ಪಿನ ಸರ್ವಾನುಮತದ ಆಯ್ಕೆ
ಗೋಕಾಕ ಏ 1 : ಇಲ್ಲಿನ ಕಲ್ಯಾಣ ಹೌಸಿಂಗ್ ಸೊಸೈಟಿಯ ಪ್ರೊಫೇಸರ್ ಕಾಲೋನಿಯ ಗಣಪತಿ ದೇವಸ್ಥಾನದಲ್ಲಿ ಶನಿವಾರ ಸಂಜೆ ನಡೆದ ಸಾಮಾನ್ಯ ಸಭೆಯಲ್ಲಿ ಗೋಕಾಕ ತಾಲ್ಲೂಕು ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷರಾಗಿ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಚನ್ನಪ್ಪ ಬಸಪ್ಪ ಕೌಜಲಗಿ ಮತ್ತು ಮಹಿಳಾ ಘಟಕ ಅಧ್ಯಕ್ಷೆಯಾಗಿ ಮಹಾದೇವಿ ಮೈಲಾರಲಿಂಗ ಉಪ್ಪಿನ ಸರ್ವಾನುಮತದಿಂದ ಆಯ್ಕೆಗೊಂಡಿದ್ದಾರೆ.
ಸಭೆಯ ಅಧ್ಯಕ್ಷತೆಯನ್ನು ಸಂಘದ ಸನ್ 2019-2023 ಅವಧಿಯ ಅಧ್ಯಕ್ಷ ಬಸನಗೌಡ ಪಾಟೀಲ ವಹಿಸಿದ್ದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಮುಖ್ಯ ಅತಿಥಿ ಸುಶೀಲಮ್ಮ ಈಶ್ವರಪ್ಪ ಕಲ್ಯಾಣಶೆಟ್ಟಿ, ಮಹಿಳಾ ಘಟಕ ಅಧ್ಯಕ್ಷೆ ಶೋಭಾ ಮನೋಹರ ಕುರಬೇಟ ಮತ್ತು ಯುವ ಘಟಕ ಅಧ್ಯಕ್ಷ ಸಂತೋಷ ಸದಾಶಿವ ಮಂತ್ರಣ್ಣವರ ಇವರ ಸಮ್ಮುಖದಲ್ಲಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯಿತು.
ಯುವ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಂದಿನ ವಾರ ಜರುಗಲಿದೆ ಎಂದು ಪ್ರಕಟಿಸಲಾಗಿದೆ.
ಪೂರ್ಣಿಮಾ ತಾಂವಶಿ ನಿರೂಪಿಸಿದರು