Breaking News

ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ನೂತನ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿಯ ಪದಗ್ರಹಣ

Spread the love

 

ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ನೂತನ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿಯ ಪದಗ್ರಹಣ

ಗೋಕಾಕ :ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ನೂತನ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದಿ. 27 ರಂದು ಸಂಜೆ 5 ಗಂಟೆಗೆ ನಗರದ ಕೆಎಲ್‍ಇ ಮಹಾದೇವಪ್ಪಣ್ಣಾ ಮುನವಳ್ಳಿ ಆಂಗ್ಲ ಮಾದ್ಯಮ ಶಾಲೆ ಆವರಣದಲ್ಲಿ ಜರುಗಲಿದೆ ಎಂದು ಪ್ರೊ. ಚಂದ್ರಶೇಖರ ಅಕ್ಕಿ ಹಾಗೂ ಗೌರವ ಕಾರ್ಯದರ್ಶಿ ಪ್ರೊ. ಸುರೇಶ ಮುದ್ದಾರೆ ಹೇಳಿದರು.

ಶುಕ್ರವಾರದಂದು ನಗರದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತ, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಇಲ್ಲಿಯ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ವಹಿಸಲಿದ್ದು, ಅಧ್ಯಕ್ಷತೆಯನ್ನು ಕೆಎಲ್‍ಇ ನಿರ್ದೇಶಕ ಜಯಾನಂದ ಮುನವಳ್ಳಿ ವಹಿಸುವರು. ಸಮಾರಂಭವನ್ನು ಶಾಸಕ ಸತೀಶ ಜಾರಕಿಹೊಳಿ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾದ ಸಾಹಿತಿ ಪ್ರೊ. ಚಂದ್ರಶೇಖರ ಅಕ್ಕಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಿಗಾರ, ಕ.ಸಾ.ಪ ಗೋಕಾಕನ ನಿಕಟಪೂರ್ವ ಅಧ್ಯಕ್ಷ ಮಹಾಂತೇಶ ತಾಂವಶಿ ಹಾಗೂ ನೂತನ ಅಧ್ಯಕ್ಷೆ ಭಾರತಿ ಮಧಬಾಂವಿ ಉಪಸ್ಥಿತರಿರಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಸಾಹಿತಿಗಳು, ಜನಪ್ರತಿನಿಧಿಗಳು, ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ನೂತನ ಅಧ್ಯಕ್ಷೆ ಭಾರತಿ ಮಧಬಾಂವಿ, ಗೌರವ ಕಾರ್ಯದರ್ಶಿ ಪ್ರೊ. ಮಹಾನಂದಾ ಪಾಟೀಲ, ಕೋಶಾಧ್ಯಕ್ಷ ಆರ.ಎಲ್.ಮಿರ್ಜಿ, ಸಮಿತಿ ಸದಸ್ಯ ಲಕ್ಷ್ಮಣ ಸೊಂಟಕ್ಕಿ ಇದ್ದರು.

 


Spread the love

About Fast9 News

Check Also

ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ಮರು ನೇಮಕ

Spread the loveರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ಮರು ನೇಮಕ ಗೋಕಾಕ ಏ, 20 :- ರಾಷ್ಟ್ರೀಯ ಮಾನವ ಹಕ್ಕುಗಳ …

Leave a Reply

Your email address will not be published. Required fields are marked *