ಬಸ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯವಿಚಾರಿಸಿದ ರಾಹುಲ ಜಾರಕಿಹೋಳಿ
ಗೋಕಾಕ ತಾಲೂಕಿನ ಗೊಡಚಿನಮಲ್ಕಿಯ ಸಮೀಪದ ರಸ್ತೆಯಲ್ಲಿ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸುಮಾರು 20ಕ್ಕೂ ಹೆಚ್ಚು ಗಾಯಗೊಂಡ ಗಾಯಾಳುಗಳನ್ನು ಗೋಕಾಕ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು ಎಲ್ಲಾ ಗಾಯಾಳುಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಪುತ್ರ ಯುವನಾಯಕ ರಾಹುಲ ಜಾರಕಿಹೊಳಿ ಅವರು ಬೇಟಿ ನೀಡಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು.
ಈ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳ ಹೆಸರು ವಿಳಾಸ ಪಡೆದು ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಿಡಿರ ಬೇಟಿ ನೀಡಿ ದೈರ್ಯ ಹೇಳಿ, ಯುವನಾಯಕ ರಾಹುಲ್ ಜಾರಕಿಹೊಳಿ ಅವರು , ಗಾಯಾಳುಗಳ ಆರೋಗ್ಯದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಗಾಯಾಳುಗಳಿಗೆ ಎಲ್ಲ ವೈದ್ಯಕೀಯ ಸೌಕರ್ಯಗಳನ್ನು ಒದಗಿಸುವಂತೆ ಮನವಿ ಮಾಡಿದರು.
Fast9 Latest Kannada News