Breaking News

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಹವಾಮಾನ ಇಲಾಖೆ ಮುನ್ಸೂಚನೆ*

Spread the love

*ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಹವಾಮಾನ ಇಲಾಖೆ ಮುನ್ಸೂಚನೆ*

ಬೆಂಗಳೂರು : ಜೂ.22 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಬೀಸಲಿದ್ದು, ಜೂ.23 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಜೂ.22 ರಿಂದ 24 ರವರೆಗೆ ಕಲಬುರಗಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದ್ದು, ಮೂರನೇ ದಿನದಿಂದ ಮೂರು ದಿನ ಯಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಇನ್ನುಳಿದ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ದಕ್ಷಿಣ ಒಳನಾಡಿಗೆ ರೆಡ್ ಅಲರ್ಟ್ ನೀಡಲಾಗಿದೆ.

ಪಶ್ಚಿಮ ಘಟ್ಟಗಳ ಕರಾವಳಿ ಮತ್ತು ಪಕ್ಕದ ಜಿಲ್ಲೆಗಳು 23 ಜೂನ್ 2024 ರಂದು ವಿಪರೀತ ಮಳೆಯೊಂದಿಗೆ ಭಾರೀ ಮತ್ತು ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.


Spread the love

About Fast9 News

Check Also

ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಪರಿಹಾರ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

Spread the love*ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಪರಿಹಾರ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕ*: ರೈತ ಬಾಂಧವರು ಸಾಲಕ್ಕೆ …

Leave a Reply

Your email address will not be published. Required fields are marked *