Breaking News

ರಸ್ತೆ ನಿಯಮಗಳನ್ನು ಪಾಲಿಸಿ, ತಮ್ಮನ್ನು ತಾವು ರಕ್ಷಿಸಿಕೊಳ್ಳಿ : ಗೋಪಾಲ ರಾಥೋಡ

Spread the love

ರಸ್ತೆ ನಿಯಮಗಳನ್ನು ಪಾಲಿಸಿ, ತಮ್ಮನ್ನು ತಾವು ರಕ್ಷಿಸಿಕೊಳ್ಳಿ : ಗೋಪಾಲ ರಾಥೋಡ

ವಿದ್ಯಾರ್ಥಿಗಳು ದೇಶದ ಸಂಪತ್ತು ಹಾಗೂ ಅದಕ್ಕಾಗಿ ತಾವುಗಳು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು
ಗೋಕಾಕ ತಾಲೂಕಿನ ಮರಡಿಮಠದಲ್ಲಿನ ಶ್ರೀಕಾಡಸಿದ್ದೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಪ್ತಾಹದಲ್ಲಿ ಗೋಕಾಕ ಸಿ,ಪಿ,ಆಯ್, ಗೋಪಾಲ ರಾಥೋಡ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿಅನೇಕ ಅಪಘಾತಗಳು ಮಾನವ ತಪ್ಪುಗಳಿಂದಲೇ ಆಗುತ್ತವೆ.ಅಮಾಯಕರು ಜೀವ ಕಳೆದುಕೊಂಡು ಅವಲಂಬಿಸಿರುವವರನ್ನು ಬೀದಿಪಾಲು ಮಾಡುತ್ತಾರೆ. ವಿದ್ಯಾರ್ಥಿಗಳು ರಸ್ತೆ ನಿಯಮಗಳನ್ನು ಹಾಗೂ ಸಂಚಾರ ಚಿಹ್ನೆಗಳನ್ನು ಚೆನ್ನಾಗಿ ಅರಿತುಕೊಳ್ಳಬೇಕು. ಸ್ವಲ್ಪವೂ ಬೇಜವಾಬ್ದಾರಿ ಅಥವಾ ನಿರ್ಲಕ್ಷ್ಯತೆ ತೋರದೆ ನಿಯಮ ಪಾಲನೆ ಮಾಡಬೇಕು. ದ್ವಿಚಕ್ರವಾಹನ ಚಲಾವಣೆ ಮಾಡುವಾಗ ಹೆಲ್ಮೆಟ್ ಧರಿಸಿರಬೇಕು. ಸಂಚಾರ ನಿಯಮಗಳನ್ನು ಪಾಲನೆ ಮಾಡಿದರೆ ಸಾಕಷ್ಟು ಅಪಘಾತಗಳನ್ನು ತಡೆಗಟ್ಟಬಹುದು ಎಂದರು.

ಇನ್ನು ಈ ಸಪ್ತಾಹ ಕಾರ್ಯಕ್ರಮದಲ್ಲಿ ಗ್ರಾಮೀಣ ಪಿ,ಎಸ್,ಐ, ನಾಗರಾಜ ಖಿಲಾರೆಯವರು ಮಾತನಾಡಿ,ವಿದ್ಯಾರ್ಥಿಗಳು ವಾಹನ ಚಲಾಯಿಸುವಾಗ ಕೂಡಲೇ ತಮ್ಮ ಕುಟುಂಬ ಮತ್ತು ಅವಲಂಬಿತರನ್ನು ನೆನಪಿಸಿಕೊಳ್ಳಬೇಕು.
ಎಲ್ಲಕಿಂತ ಜೀವ ಮುಖ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಮೊಬೈಲ್‌ನಲ್ಲಿ ಮಾತನಾಡುತ್ತಾ ಚಾಲನೆ ಮಾಡುವುದನ್ನು ಕಡ್ಡಾಯವಾಗಿ ನಿಲ್ಲಿಸಬೇಕೆಂದರು.

ಅದರ ಜೊತೆಯಲ್ಲಿ ಚಾಲನಾ ಪರವಾಣಿಗೆ ಇಲ್ಲದವರಿಗೆ ತಮ್ಮ ವಾಹನವನ್ನು ನೀಡಬಾರದು. ತಾವೆಲ್ಲರೂ ವಾಹನಗಳಿಗೆ ಸಂಬಂಧಪಟ್ಟ ದಾಖಲೆಗಳ ಒಂದು ಸೆಟ್ ಅನ್ನು ವಾಹನದಲ್ಲಿ ಜೋಪಾನವಾಗಿ ಇಟ್ಟಿರಬೇಕು. ದಾಖಲೆಗಳು ಇಲ್ಲದೆ ರಸ್ತೆಗೆ ಬರಬಾರದು. ಚಾಲನಾ ಪರವಾನಗಿ, ವಾಹನದ ಆರ್.ಸಿ, ವಿಮೆ ದಾಖಲೆ, ಎಮಿಷನ್ ಪ್ರಮಾಣ ಪತ್ರ ಮತ್ತಿತರ ವಿವರ ಹೊಂದಿರಬೇಕು. ಕಾನೂನುಗಳು ಬದಲಾಗಿದ್ದು ನಿಯಮಗಳ ಉಲ್ಲಂಘನೆಗೆ ದಂಡ ಹೆಚ್ಚಿಸಲಾಗಿದೆ ಅದಕ್ಕಾಗಿ ತಾವುಗಳು ರಸ್ತೆ ನಿಯಮ ಪಾಲಿಸುತ್ತ ತಮ್ಮ ಜೀವವನ್ನು ರಕ್ಷಿಸಿಕೊಳ್ಳಲು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಸಿಬ್ಬಂದಿಗಳಾದ ಬರಗಾಲಿ, ಮೊರೇ ತಳವಾರ ಹಾಗೂ ಇನ್ನುಳಿದ ಶಿಕ್ಷಕರು ಹಾಗೂ ನೂರಾರು ವಿದ್ಯಾರ್ಥಿಗಳು ಈ ರಸ್ತೆ ಸಪ್ತಾಹದಲ್ಲಿ ಪಾಲ್ಗೊಂಡಿದ್ದರು.


Spread the love

About Fast9 News

Check Also

ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷ ಚನ್ನಪ್ಪ ಕೌಜಲಗಿ, ಮಹಿಳಾ ಘಟಕ ಅಧ್ಯಕ್ಷೆ ಮಹಾದೇವಿ ಉಪ್ಪಿನ ಸರ್ವಾನುಮತದ ಆಯ್ಕೆ

Spread the loveಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷ ಚನ್ನಪ್ಪ ಕೌಜಲಗಿ, ಮಹಿಳಾ ಘಟಕ ಅಧ್ಯಕ್ಷೆ ಮಹಾದೇವಿ ಉಪ್ಪಿನ ಸರ್ವಾನುಮತದ …

Leave a Reply

Your email address will not be published. Required fields are marked *