Breaking News

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ವಸತಿ ನಿಲಯಗಳನ್ನು ಪ್ರಾರಂಭಿಸಲಾಗುತ್ತಿದೆ-ಶಾಸಕ ರಮೇಶ ಜಾರಕಿಹೊಳಿ

Spread the love

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ವಸತಿ ನಿಲಯಗಳನ್ನು ಪ್ರಾರಂಭಿಸಲಾಗುತ್ತಿದೆ-ಶಾಸಕ ರಮೇಶ ಜಾರಕಿಹೊಳಿ

ಗೋಕಾಕ: ನಗರ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ವಸತಿ ನಿಲಯಗಳನ್ನು ಪ್ರಾರಂಭಿಸಲಾಗುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಶನಿವಾರದಂದು ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ಮಿಸಲಾದ ಮೆಟ್ರಕ್ ನಂತರದ ಬಾಲಕರ ಮತ್ತು ಬಾಲಕಿಯರ ವಸತಿ ನಿಲಯಗಳ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರಕಾರ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಮಹತ್ವ ನೀಡಿ ಹಲವಾರು ಸೌಲಭ್ಯಗಳನ್ನು ಕಲ್ಪಿಸುತ್ತಿದೆ. ೩.೮೯ ಕೋಟಿ ರೂಗಳಲ್ಲಿ ಮೆಟ್ರಿಕ ನಂತರದ ಬಾಲಕರ ಹಾಗೂ ೩.೮೫ ಕೋಟಿ ರೂಗಳಲ್ಲಿ ಬಾಲಕಿಯರ ವಸತಿ ನಿಲಯಗಳನ್ನು ಪ್ರಾರಂಭಿಸಲಾಗಿದ್ದು ಇವುಗಳ ಸದುಪಯೋಗ ಹಾಗೂ ಕಠಿಣ ಪರಿಶ್ರಮದಿಂದ ವಿದ್ಯಾರ್ಥಿಗಳು ಸಾಧಕರಾಗಿ ತಮ್ಮ ಬದುಕನ್ನು ರೂಪಿಸಿಕೊಳ್ಳವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷ ಬಸವರಾಜ ಆರೆನ್ನವರ, ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಪೌರಾಯುಕ್ತ ಶಿವಾನಂದ ಹಿರೇಮಠ, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಎಸ್.ವ್ಹಿ.ಕಲಪ್ಪನವರ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಚಂದ್ರಶೇಖರ್ ಉಪಸ್ಥಿತರಿದ್ದರು.


Spread the love

About Fast9 News

Check Also

ನಿವೃತ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕ ಬಿ , ಎ, ವಂಟಮೂರಿಗೆ ಪತ್ನಿ ವಿಯೋಗ

Spread the loveನಿವೃತ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕ ಬಿ , ಎ, ವಂಟಮೂರಿಗೆ ಪತ್ನಿ ವಿಯೋಗ …

Leave a Reply

Your email address will not be published. Required fields are marked *