ನಂದವಾಡಗಿ ಏತ ನೀರಾವರಿ ಯೋಜನೆ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ದೀರ್ಘ ಚರ್ಚೆ
ನಂದವಾಡಗಿ ಏತ ನೀರಾವರಿ ಯೋಜನೆಗೆ ಸಂಬಂಧಿಸಿದ ಉನ್ನತ ಮಟ್ಟದ ಸಭೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿಂದು ನಡೆಯಿತು.
ಕೃಷ್ಣ ಭಾಗ್ಯ ಜಲನಿಗಮ ನಿಯಮಿತದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಂದವಾಡಗಿ ಏತ ನೀರಾವರಿ 2ನೇ ಹಂತದ ಯೋಜನೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.
ಸಭೆಯಲ್ಲಿ ಕೊಪ್ಪಳ ಕ್ಷೇತ್ರದ ಲೋಕಸಭಾ ಸದಸ್ಯ ಸಂಗಣ್ಣ ಕರಡಿ, ಮಸ್ಕಿ ಕ್ಷೇತ್ರದ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಕೆ ಬಿ ಜೆ ಎನ್ ಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಭಾಕರ ಚಿಣಿ, ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Fast9 Latest Kannada News