Breaking News

ಮಕ್ಕಳಿಗಾಗಿ ಆಸ್ತಿ ಮಾಡದೇ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿರಿ”

Spread the love

“ಮಕ್ಕಳಿಗಾಗಿ ಆಸ್ತಿ ಮಾಡದೇ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿರಿ”

ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕಲಿಸಿ-ಮುರುಘರಾಜೇಂದ್ರ ಶ್ರೀಗಳು
ಘಟಪ್ರಭಾ: ಶಿಕ್ಷಕರು ಮಕ್ಕಳಿಗೆ ಅಕ್ಷರ ಜ್ಞಾನದ ಜೊತೆಗೆ ಉತ್ತಮ ಸಂಸ್ಕಾರವನ್ನು ಕಲಿಸುವ ಮೂಲಕ ಸಮಾಜದ ಸ್ವಾಸ್ಥ್ಯಕ್ಕೆ ಶ್ರಮಿಸಬೇಕು. ಮತ್ತು ಪಾಲಕರು ಮಕ್ಕಳಿಗಾಗಿ ಆಸ್ತಿ ಮಾಡದೇ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿರಿ ಎಂದು ಗೋಕಾಕದ ಶೂನ್ಯ ಸಂಪಾದನಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು.
ಅವರು ಶುಕ್ರವಾರದಂದು ಸಮೀಪದ ಶಿಂದಿಕುರಬೇಟ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಗಂಡು-ಹೆಣ್ಣು ಮಕ್ಕಳ ಶಾಲೆಯ 7ನೇ ವರ್ಗದ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಬಿಳ್ಕೋಡುವ ಸಮಾರಂಭ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
ಗುರುವನ್ನು ಗೌರವಿಸುವಂತಹ ಪರಂಪರೆ ನಮ್ಮ ನೆಲದ ಗುಣ, ಶಿಕ್ಷಣದಿಂದ ಸಮಾಜ ನಿರ್ಮಾಣವಾಗಬೇಕಿದೆ. ಸರಕಾರಿ ಶಾಲೆಯಲ್ಲಿ ಕಲಿತ ಹಲವಾರು ವಿದ್ಯಾರ್ಥಿಗಳು ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ತಾಯಂದಿರು ಮಕ್ಕಳ ಕಡೆ ಗಮನ ಹರಿಸಿ ಅವರಿಗೆ ಒಳ್ಳೇಯ ಜ್ಞಾನ ಹಾಗೂ ಸಂಸ್ಕಾರ ನೀಡುವುದು ಮುಖ್ಯವಾಗಿದೆ. ವಿದ್ಯಾರ್ಥಿಗಳು ತಾವು ಉತ್ತಮ ಶಿಕ್ಷಣ ಪಡೆದು ತಾವು ಕಲಿತ ಶಾಲೆಗೆ ಮತ್ತು ಗ್ರಾಮಕ್ಕೆ ಕೀರ್ತಿ ತರುವಂತಾಗಲಿ ಎಂದು ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಲ್ಲಾಪೂರ ಪಿಜಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ಕೆ.ಎಸ್.ಮಾರಾಪೂರ ಮಾತನಾಡಿ ಶಿಕ್ಷಣದಿಂದ ಮಾತ್ರ ದೇಶದ ಭವಿಷ್ಯ ನಿರ್ಮಾಣ ಸಾಧ್ಯ. ಇಂದಿನ ದಿನಮಾನಗಳಲ್ಲಿ ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದು ಮಕ್ಕಳನ್ನು ಅಕ್ಷರವಂತರನ್ನಾಗಿ ಮಾಡಿದಾಗ ಮಾತ್ರ ದೇಶದ ಹಾಗೂ ಸಮಾಜದ ಪ್ರಗತಿಗೆ ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದರೆ ಸಾಕಷ್ಟು ಅವಕಾಶಗಳು ಸಿಗುತ್ತವೆ. ಪರೀಕ್ಷೆಗಳನ್ನು ಧೈರ್ಯದಿಂದ ಎದುರಿಸಿ ತಂದೆತಾಯಿ, ಗುರುಗಳು ಮೆಚ್ಚುವ ರೀತಿಯಲ್ಲಿ ಫಲಿತಾಂಶ ಪಡೆದು ಪ್ರತಿಭಾನ್ವಿತರಾಗಬೇಕೆಂದು ಹೇಳಿದರು.
ವೇದಿಕೆ ಮೇಲೆ ಬಸವ ಪ್ರಭು ಸ್ವಾಮಿಜಿ, ಗ್ರಾ.ಪಂ ಅಧ್ಯಕ್ಷೆ ಸುಮಿತ್ರಾ ಮಾಯನ್ನವರ, ಉಪಾಧ್ಯಕ್ಷೆ ಸುಜಾತಾ ಲಗಳೇರ, ಗ್ರಾ.ಪಂ ಸದಸ್ಯರಾದ ಭೀಮಶಿ ಬಿರನಾಳಿ, ಮಂಜುನಾಥ ಗುಡಕೇತ್ರ, ಮುಖಂಡರಾದ ಜ್ಯೋತೆಪ್ಪ ಬಂತಿ, ಸಿದ್ಧಾರೂಢ ಕಂಬಾರ, ಶೇಖರ ಮಾನೆ, ಹಾಲಪ್ಪ ಕರಿಗಾರ, ಯಮನಪ್ಪ ಹೊನಕುಪ್ಪಿ, ಎಸ್‍ಡಿಎಂಸಿ ಅಧ್ಯಕ್ಷರುಗಳಾದ ಶ್ರೀಧರ ಕಂಬಾರ, ದಯಾನಂದ ಕಳಸನ್ನವರ, ಬಸವರಾಜ ಗೋಕಾಕ, ನಿವೃತ್ತ ಪ್ರಾಚಾರ್ಯ ವೈ.ಬಿ. ಹಾದಿಮನಿ, ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ಎಂ.ಬಡಕಲ್, ಎ.ಪಿ.ಪರಸನ್ನವರ, ಆನಂದ ಹಂಜ್ಯಾಗೋಳ, ಕೆ.ಆರ್.ಅಜ್ಜಪ್ಪನವರ, ಪಿ.ಎಚ್.ಗೋಸಬಾಳ. ಪಿ.ಎಲ್. ಮಲ್ಲಾಪೂರ ಸೇರಿದಂತೆ ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಪಾಲಕರು ಉಪಸ್ಥಿತರಿದ್ದು ಶಾಲೆಯ ಪರವಾಗಿ ವೇದಿಕೆ ಮೇಲಿನ ಪೂಜ್ಯರನ್ನು ಹಾಗೂ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪ್ರಧಾನಗುರು ಶ್ರೀಕಾಂತ ಹಂಚಿನಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಬಿ.ಪಾಟೀಲ ಸ್ವಾಗತಿಸಿದರು. ಶಿಕ್ಷಕಿ ಆರ್.ಎಂ.ಹುಣಶ್ಯಾಳಕರ ನಿರೂಪಿಸಿದರು. ಶಿಕ್ಷಕಿ ಜ್ಯೋತಿ ಮೇಟಿ ವಂದಿಸಿದರು. ನಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು


Spread the love

About Fast9 News

Check Also

ಮೋದಿಯವರನ್ನು ಸೋಲಿಸಲು ನಮ್ಮ ವಿರೋಧಿಗಳಿಗೆ ಶತ್ರು ರಾಷ್ಟ್ರಗಳ ಬೆಂಬಲ-* *ಎನ್ಡಿಎ ಅಭ್ಯರ್ಥಿ ಜಗದೀಶ್ ಶೆಟ್ಟರ್*

Spread the love*ಪ್ರಧಾನಿ ಮೋದಿಯವರಿಂದಾಗಿ ಭಾರತಕ್ಕೆ ವಿಶ್ವ ಮನ್ನಣೆ* *ಮೋದಿಯವರನ್ನು ಸೋಲಿಸಲು ನಮ್ಮ ವಿರೋಧಿಗಳಿಗೆ ಶತ್ರು ರಾಷ್ಟ್ರಗಳ ಬೆಂಬಲ-* *ಎನ್ಡಿಎ …

Leave a Reply

Your email address will not be published. Required fields are marked *