Breaking News

ಕಬಡ್ಡಿ ಸ್ಪರ್ಧೆ ಗ್ರಾಮೀಣ ಸೊಗಡನ್ನು ಬಿಂಬಿಸುವ ಆಟ : ರಾಹುಲ್ ಜಾರಕಿಹೊಳಿ

Spread the love

  • ಕಬಡ್ಡಿ ಸ್ಪರ್ಧೆ ಗ್ರಾಮೀಣ ಸೊಗಡನ್ನು ಬಿಂಬಿಸುವ ಆಟ : ರಾಹುಲ್ ಜಾರಕಿಹೊಳಿ-ಕಬಡ್ಡಿ ಕ್ರೀಡೆಯನ್ನ ಉಳಿಸುವ ಜವಾಬ್ದಾರಿ ಗ್ರಾಮೀಣ ಪ್ರದೇಶದ ಯುವಕರ ಮೇಲಿದೆ

ಸವದತ್ತಿ: ‘ ನಶಿಸಿ ಹೋಗುತ್ತಿರುವ ಕಬಡ್ಡಿ ಕ್ರೀಡೆಯನ್ನ ಮತ್ತೆ ಜನಪ್ರಿಯಗೊಳಿಸುವ ಜವಾಬ್ದಾರಿ ಗ್ರಾಮೀಣ ಪ್ರದೇಶ ಯುವಕರ ಮೇಲಿದೆ’ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು.

ತಾಲ್ಲೂಕಿನ ಸಿಂದೋಗಿ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ, ಮಾತನಾಡಿದರು.

  • ‘ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಕಬಡ್ಡಿ ಪಂದ್ಯಾವಳಿಗಳನ್ನು ಆಯೋಜಿಸಬೇಕು. ಇದರಿಂದ ನಶಿಸಿ ಹೊಗುತ್ತಿರುವ ಕಬಡ್ಡಿ ಪುನಃ ಜನಪ್ರಿಯತೆ ಪಡೆಯಲಿದೆ. ಈ ಜವಾಬ್ದಾರಿ ಗ್ರಾಮೀಣ ಪ್ರದೇಶದ ಯುವಕರ ಮೇಲಿದೆ’ ಎಂದರು.

‘ ಕ್ರೀಡೆಗೆ ಕಳೆದ ಎರಡೂವರೆ ದಶಕಗಳಿಂದ ನಮ್ಮ ತಂದೆಯವರಾದ ಸತೀಶ್ ಜಾರಕಿಹೊಳಿ ಅವರು, ನಿರಂತರ ಪ್ರೋತ್ಸಾಹ ನೀಡುತ್ತಾ ಬರುತ್ತಿದ್ದಾರೆ‌. ಅವರ ಮಾರ್ಗದರ್ಶನದಲ್ಲಿ ನಾವು ಕೂಡಾ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡುವ ದಿಶೆಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದು ಹೇಳಿದರು.

‘ ಕಬಡ್ಡಿ ಸ್ಪರ್ಧೆ ಗ್ರಾಮೀಣ ಸೊಗಡನ್ನು ಬಿಂಬಿಸುವ ಒಂದು ಆಟವಾಗಿದೆ. ತನ್ನದೇ ಆದ ವೈಶಿಷ್ಟತೆ ಹೊಂದಿರುವ ಕಬಡ್ಡಿ ಆಟಗಾರಿಗೆ ದೈಹಿಕ ಶಕ್ತಿ ಬೆಳೆಯಲು ಸಹಾಯಕವಾಗುವ ಜತೆಗೆ ಚತುರತೆ ಬೆಳೆಸುತ್ತದೆ’ ಎಂದು ತಿಳಿಸಿದರು.

ಇದೇ ವೇಳೆ ಗ್ರಾಮಸ್ಥರು, ಮುಖಂಡರು ರಾಹುಲ್ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಪಂಚನಗೌಡ ದ್ಯಾಮನಗೌಡ, ಅಶ್ವಥ್ ವೈದ್ಯ, ವಿಶ್ವಾಸ್ ವೈದ್ಯ, ಚಂದ್ರಣ್ಣ ಶಾಮರಾಯ್, ತಾಲ್ಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲು ಜಕಾತಿ, ಪಾಂಡು ಮನ್ನಿಕೇರಿ, ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.


Spread the love

About Fast9 News

Check Also

ಅನೈತಿಕ ಸಂಬಂಧ,ಮನೆಗೆ ಕರೆಯಿಸಿ ಕೊಲೆ,, ಪತ್ನಿ ಆಸ್ಪತ್ರೆಯಲ್ಲಿ,,,

Spread the loveಅನೈತಿಕ ಸಂಬಂಧ,ಮನೆಗೆ ಕರೆಯಿಸಿ ಕೊಲೆ,, ಪತ್ನಿ ಆಸ್ಪತ್ರೆಯಲ್ಲಿ,,, ಒಂದು ವಿಷಯ ಮಾತಾಡೊದಿದೆ ಎಂದು ಮನೆಗೆ ಕರೆಯಸಿ ಮಾರಕಾಸ್ತ್ರಗಳಿಂದ …

Leave a Reply

Your email address will not be published. Required fields are marked *