ಚಿಂಚಲಿ ಮಾಯಕ್ಕಾ ಮತ್ತು ಸವದತ್ತಿ ಯಲ್ಲಮ್ಮ ದೇವಸ್ಥಾನಗಳು ಶಿಘ್ರದಲ್ಲಿ ತೆರೆಯಲಿವೆ :ಜಿಲ್ಲಾಧಿಕಾರಿ ಹಿರೇಮಠ
ಬೆಳಗಾವಿ:ಜಿಲ್ಲೆಯಲ್ಲಿ ಕೋವಿಡ ಪ್ರಕರಣಗಳು ಕಡಿಮೆಯಾಗಿರುವುದರಿಂದ ಭಕ್ತರ ಬೇಡಿಕೆಗಳನ್ನು ಗಮನದಲ್ಲಿ ಇಟ್ಟುಕೊಂಡು ಶೀಘ್ರವೇ ಚಿಂಚಲಿ ಮಾಯಕ್ಕ ಮತ್ತು ಯಲ್ಲಮ್ಮ ದೇವಿ ದೇವಸ್ಥಾನಗಳನ್ನು ಓಪನ್ ಮಾಡಲಿದ್ದೇವೆ ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಅವರು ತಿಳಿಸಿದರು.
ಶನಿವಾರ ತಮ್ಮ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಜಿಲ್ಲೆಯ ಪಾಸಿಟಿವ್ ರೇಟ್ ಕಡಿಮೆ ಇರುವ ಕಾರಣ ಗಣಪತಿ ಹಬ್ಬ ಮುಗಿದ ತಕ್ಷಣ ಸಭೆ ಮಾಡಿ ಚಿಂಚಲಿ ಮಾಯಕ್ಕಾ ಹಾಗೂ ಸವದತ್ತಿ ಯಲ್ಲಮ್ಮ ದೇವಸ್ಥಾನಗಳನ್ನು ತೆರೆಯುವ ಸಂಬಂಧಿಸಿದಂತೆ ನಿರ್ಣಯ ಕೈಗೊಳ್ಳಲಿದ್ದೇನೆ ಎಂದು ತಿಳಿಸಿದರು. ಚಿಂಚಲಿ ಮಾಯಕ್ಕ ಹಾಗೂ ಸವದತ್ತಿ ಯಲ್ಲಮ್ಮ ದೇವಸ್ಥಾನಗಳಿಗೆ ನೆರೆಯ ರಾಜ್ಯ ಮಹಾರಾಷ್ಟ್ರದಿಂದ ಸಾಕಷ್ಟು ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ಮಾರ್ಗಸೂಚಿಗಳನ್ನು ಹಾಕಿಕೊಂಡು ದೇವಸ್ಥಾನಗಳಲ್ಲಿ ಭಕ್ತರಿಗೆ ಅವಕಾಶ ನೀಡಲು ಚಿಂತನೆ ನಡೆದಿದೆ ಎಂದು ತಿಳಿಸಿದರು.